ಮೆಲ್ಬರ್ನ್: ಭಾರತ ಮತ್ತು ಆಸ್ಟ್ರೇಲಿಯಾದ ನಡುವೆ ಮೆಲ್ಬರ್ನ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾವನ್ನು 27ರನ್‌ಗಳಿಂದ ಸೋಲಿಸಿದೆ.
ಮೂರು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಬ್ಯಾಕ್ ಟು ಬ್ಯಾಕ್ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿ ಕೈವಶ ಮಾಡಿಕೊಂಡಿದೆ.ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯನ್ನು ಜಯಿಸಿದ್ದಲ್ಲದೇ 2-0 ಮುನ್ನಡೆ ಸಾಧಿಸಿದೆ. ಗೆಲ್ಲಲು 185ರನ್‌ಗಳ ಗುರಿ ಬೆನ್ನಟ್ಟಿದ ಕಾಂಗರೂ 20 ಓವರ್ ಗಳಲ್ಲಿ 8ವಿಕೆಟ್ ನಷ್ಟಕ್ಕೆ ಕೇವಲ157ರನ್ ಗಳಿಸಲು ಮಾತ್ರ ಶಕ್ಯವಾಯಿತು. ಭಾರತದ ಪರ ಜಡೇಜಾ ಮತ್ತು ಬುಮ್ರಾ ತಲಾ ಎರಡು ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿದರು.
ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಇದರೊಂದಿಗೆ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ 60, ಶಿಖರ್ ಧವನ್ 42, ಎಂಎಸ್ ಧೋನಿ 14 ರನ್ ಗಳಿಸಿ ಔಟಾದರೆ, ವಿರಾಟ್ ಕೊಹ್ಲಿ ಅಜೇಯ 59 ರನ್ ಹಾಗೂ ಸುರೇಶ್ ರೈನಾ ಅಜೇಯ 0 ಗಳಿಸಿದ್ದಾರೆ.