ಮೂಡುಬಿದಿರೆ: ಒಡಿಸ್ಸಾದ ಭುವನೇಶ್ವರದಲ್ಲಿ ಜರುಗುತ್ತಿರುವ ರಾಷ್ಟ್ರೀಯ ಜೂನಿಯರ್ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಕನರ್ಾಟಕವನ್ನು ಪ್ರತಿನಿಧಿಸಿದ ಭವಿಷ್ಯ ಬೆಳ್ಳಿಯ ಪದಕವನ್ನು ಪಡೆದಿದ್ದಾರೆ.
ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿರುವ ಈಕೆ 69ಕೆಜಿ ದೇಹತೂಕ ವಿಭಾಗದಲ್ಲಿ ಸ್ಪರ್ಧಿಸಿರುವ ಭವಿಷ್ಯ ಸ್ನಾಚ್ ನಲ್ಲಿ 70ಕೆಜಿ ಕ್ಲೀನ್ ಮತ್ತು ಜರ್ಕ್ ವಿಭಾಗದಲ್ಲಿ 90ಕೆಜಿ ಒಟ್ಟು 160 ಕೆಜಿ ಭಾರವನ್ನೆತ್ತಿ ಬೆಳ್ಳಿಯ ಪದಕವನ್ನು ಪಡೆದಿದ್ದಾರೆ.