ಮುಂಬೈ: ಭಾರತದ ಟೆಸ್ಟ್ ಕ್ರಿಕೆಟ್ ನ ನಾಯಕ ವಿರಾಟ್ ಕೊಹ್ಲಿ ದಾಖಲೆಯನ್ನು ಕನ್ನಡಿಗ ಕರುಣ್ ನಾಯರ್ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಸರಿಗಟ್ಟಿದ್ದಾರೆ.
ವಿರಾಟ್ ಕೊಹ್ಲಿ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ವೈಯಕ್ತಿಕ ಗರಿಷ್ಠ 235 ರನ್ ಗಳಿಸಿದ್ದು, ಇದೀಗ ಈ ದಾಖಲೆಯನ್ನು ಕರುಣ್ ನಾಯರ್ ಸರಿಗಟ್ಟಿದ್ದಾರೆ.
ಕರುಣ್ ನಾಯರ್ ಈಗ ನಡೆಯುತ್ತಿರುವ ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಗೆ ಪಾದಾರ್ಪಣೆ ಮಾಡಿದ್ದು, ನಾಯರ್ ದ್ವಿಶತಕ ಸಾಧನೆಯನ್ನು ಎರಡನೇ ಟೆಸ್ಟ್ ಪಂದ್ಯದಲ್ಲಿ ಮಾಡಿದ್ದಾರೆ. ಈ ಮೂಲಕ ನಾಯರ್ ಟೆಸ್ಟ್ ನಲ್ಲಿ ಚೊಚ್ಚಲ ದ್ವಿಶತಕ ಸಾಧನೆ ಮಾಡಿದ್ದಾರೆ.