ಚಂಡೀಗಡ: ನಾನು ರಾಜಕೀಯಕ್ಕೆ ಸೇರುವುದಿಲ್ಲ. ವಿನಾಕಾರಣ ಸುದ್ದಿ ಹಬ್ಬಿಸಬೇಡಿ ಎಂದು ಕ್ರಿಕೆಟಿಗ ಹರ್ಭಜನ್ ಸಿಂಗ್ ಹೇಳಿದ್ದಾರೆ.
ಅಮೃತ ಸರ ಲೋಕಸಭೆ ಅಭ್ಯರ್ಥಿ ಅಥವಾ ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಹರ್ಭಜನ್ ಸಿಂಗ್ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹರಡಿತ್ತು, ಬಗ್ಗೆ ಟ್ವೀಟ್ ಮಾಡಿರುವ ಹರ್ಭಜನ್ ಸಿಂಗ್ ನನಗೆ ರಾಜಕೀಯ ಸೇರುವ ಆಸೆ ಇಲ್ಲ ಎಂದು ತಿಳಿಸಿದ್ದಾರೆ. ಚುನಾವಣಾ ಆಯೋಗಕ್ಕೆ ರಾಯಭಾರಿಯಾಗಿದ್ದ ಭಜ್ಜಿ ತಾವು ಯಾವುದೇ ಪಕ್ಷಕ್ಕೂ ಸೇರ್ಪೆಡೆಯಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.