News Kannada
Wednesday, February 01 2023

ಕ್ರೀಡೆ

ಇಂದು 17ನೇ ರಾಷ್ಟ್ರೀಯ ಸ್ಕೌಟ್ಸ್ – ಗೈಡ್ಸ್ ಜಾಂಬೂರಿಗೆ ಚಾಲನೆ

Photo Credit :

ಇಂದು 17ನೇ ರಾಷ್ಟ್ರೀಯ ಸ್ಕೌಟ್ಸ್ - ಗೈಡ್ಸ್ ಜಾಂಬೂರಿಗೆ ಚಾಲನೆ

ಮೈಸೂರು: ಇಲ್ಲಿನ ನಂಜನಗೂಡು ರಸ್ತೆಯ ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಡಿ.29 ರಿಂದ 2017 ಜನವರಿ 4 ರವರೆಗೆ ನಡೆಯಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ 17ನೇಯ ರಾಷ್ಟ್ರೀಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೂರಿ ಕಾರ್ಯಕ್ರಮವನ್ನು ಮಧ್ಯಾಹ್ನ 3.15ಗಂಟೆಗೆ  ರಾಷ್ಟ್ರಪತಿ ಪ್ರಣಬ್ ಮುಖರ್ಜಿ  ಉದ್ಘಾಟಿಸುವ ಮೂಲಕ ಚಾಲನೆ ನೀಡಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷತೆ ವಹಿಸುವ ಕಾರ್ಯಕ್ರಮದಲ್ಲಿ ರಾಸಾಯನಿಕ ಗೊಬ್ಬರ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್.ಎನ್. ಅನಂತ ಕುಮಾರ್, ಯುವಜನ ಸೇವೆ ಮತ್ತು ಕ್ರೀಡೆಗಳ ರಾಜ್ಯ ಸಚಿವರಾದ ವಿಜಯ ಗೋಯಲ್, ಲೋಕೋಪಯೋಗಿ ಹಾಗೂ ಮೈಸೂರು ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ತನ್ವೀರ್ ಸೇಠ್, ಮೈಸೂರಿನ ರಾಜಮಾತಿ ಡಾ. ಪ್ರಮೋದದೇವಿ ಒಡೆಯರ್, ನವದೆಹಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಧ್ಯಕ್ಷರಾದ ಡಾ. ಅನಿಲ್ ಕುಮಾರ್ ಜೈನ್, ನವದೆಹಲಿಯ ರಾಷ್ಟ್ರೀಯ ಆಯುಕ್ತರಾದ ಬಿ.ಐ. ನಾಗರಾಳೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್. ಸಿಂಧ್ಯ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 6.30 ಗಂಟೆಗೆ ಸ್ಕೌಟ್ಸ್-ಗೈಡ್ ಪ್ರದರ್ಶನ ನಡೆಯಲಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಉಮಾಶ್ರೀ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ನವದೆಹಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿರ್ದೇಶಕರಾದ ಬಿ.ರಂಗರಾವ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಿ.ವಿ. ಪ್ರಸಾದ್, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಸುಭಾಷ್ ಚಂದ್ರ,  ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್, ಕರ್ನಾಟಕ ನಿವೃತ್ತ ಪೊಲೀಸ್ ಮಹಾನಿರ್ದೇಶಕರಾದ ಬಿ. ಶಂಕರ ಬಿದರಿ, ಬೆಂಗಳೂರು ಎಚ್.ಎ.ಎಲ್. ಮುಖ್ಯ ವ್ಯವಸ್ಥಾಪಕ ನಿರ್ದೇಶಕರಾದ ಸುವರ್ಣ ರಾಜು, ನವದೆಹಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿವೃತ್ತ ಜಂಟಿ ನಿರ್ದೇಶಕರಾದ ವಿ.ಆರ್. ಗಣಾಥೆ,  ಕರ್ನಾಟಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಪಾಧ್ಯಕ್ಷರಾದ ಬಿ.ಎಸ್. ಲೂಕಾಸ್, ನವದೆಹಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿವೃತ್ತ ನಿರ್ದೇಶಕರಾದ ಕೆ.ಬಿ. ಚಂದ್ರಶೇಖರನ್ ನಾಯರ್ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಂಜೆ 7 ಗಂಟೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಾಪಕ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮಕ್ಕೆ ನವದೆಹಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ರಾಷ್ಟ್ರೀಯ ಆಯುಕ್ತರಾದ ಬಿ.ಐ. ನಾಗರಾಳೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನವದೆಹಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಪಾಧ್ಯಕ್ಷರಾದ ಗೀತ ನಟರಾಜ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ನವದೆಹಲಿ ಕೇಂದ್ರೀಯ ವಿದ್ಯಾಲಯ ಸಂಘಟನೆ  ವಿಜಯಲಕ್ಷ್ಮಿ, ಉತ್ತರಖಂಟ ರಾಕೇಶ್ ಧವನ್, ಮೈಸೂರು  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಪಾಧ್ಯಕ್ಷರಾದ ಕಮಲಾ ರಾಮನ್, ಬೆಂಗಳೂರಿನ ದಕ್ಷಿಣ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತರಾದ ಎಂ.ಕೆ.ಖಾನ್, ಕರ್ನಾಟಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರ ಸ್ಥಾನಿಕ ಆಯುಕ್ತರಾದ (ಸ್ಕೌಟ್ಸ್) ಎನ್. ಶ್ರೀನಿವಾಸನ್, ಕರ್ನಾಟಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರ ಸ್ಥಾನಿಕ ಆಯುಕ್ತರಾದ (ಸ್ಕೌಟ್ಸ್) ವಿ. ಪಳನಿ, ಕರ್ನಾಟಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರ ಸ್ಥಾನಿಕ ಆಯುಕ್ತ (ಗೈಡ್ಸ್) ಎನ್.ಕೆ. ಛಾಯ, ಕರ್ನಾಟಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರ ಸ್ಥಾನಿಕ ಆಯುಕ್ತರಾದ  (ಗೈಡ್ಸ್) ಸುಶೀಲ ಚೆಂಗಪ್ಪ,  ಕರ್ನಾಟಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರ ಸ್ಥಾನಿಕ ಆಯುಕ್ತರಾದ  (ರೇಂಜರ್ಸ್) ಎಸ್.ವಿ.ಸುಮನ್ ಉಪಸ್ಥಿತರಿರುತ್ತಾರೆ.

See also  ಎಫ್‌ಐಎಚ್ ಶ್ರೇಯಾಂಕ: ಆರನೇ ಸ್ಥಾನವನ್ನು ಸಾಧಿಸಿದ ಭಾರತದ ಮಹಿಳೆಯರ ಹಾಕಿ ತಂಡ

ರಾತ್ರಿ 8 ಗಂಟೆಗೆ ಕರ್ನಾಟಕ ದಿನಾಚರಣೆ ನಡೆಯಲಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಆರ್.ವಿ. ದೇಶಪಾಂಡೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಾಜಿ ಮುಖ್ಯ ಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು