ಹೊಸದಿಲ್ಲಿ: ಸುಪ್ರೀಂಕೋರ್ಟ್ ಅನುರಾಗ್ ಠಾಕೂರ್ ಅವರನ್ನು ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ವಜಾಮಾಡಿದೆ.
ಮಾತ್ರವಲ್ಲ ಅಜಯ್ ಶಿರ್ಕೆ ಅವರನ್ನು ಕೂಡ ಬಿಸಿಸಿಐ ಕಾರ್ಯದರ್ಶಿ ಸ್ಥಾನದಿಂದ ವಜಾಮಾಡಲಾಗಿದೆ.
ಸುಪ್ರೀಂಕೋರ್ಟ್ ಈ ಮಹತ್ವದ ಆದೇಶವನ್ನು ಲೋದಾ ಸಮಿತಿ ವರದಿ ಆಧರಿಸಿ ನೀಡಿದ್ದು, ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಠಾಕೂರ್ ಅವರ ನೇತೃತ್ವದ ನ್ಯಾಯಪೀಠ ಈ ಆದೇಶವನ್ನು ಹೊರಡಿಸಿದೆ.
ಹಿರಿಯ ವಕೀಲರಾದ ಫಾಲಿ ನಾರಿಮನ್ ಮತ್ತು ಗೋಪಾಲ್ ಸುಬ್ರಮಣಿಯನ್ ಅವರನ್ನು ಬಿಸಿಸಿಐನ ಪದಾಧಿಕಾರಿಗಳ ಆಯ್ಕೆಗಾಗಿ ಸುಪ್ರೀಂಕೋರ್ಟ್ ಅಮಿಕಸ್ ಕ್ಯೂರಿಗಳನ್ನಾಗಿ ನೇಮಿಸಿದ್ದು, ನ್ಯಾಯಪೀಠವು ಹೊಸ ಆಡಳಿತಾಧಿಕಾರಿಗಳನ್ನು ಬಿಸಿಸಿಐಗೆ ನೇಮಿಸುವುದಾಗಿ ತಿಳಿಸಿದ್ದು, ಈ ಬಗ್ಗೆ ಜನವರಿ 19ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದೆ.