News Kannada
Friday, December 02 2022

ಕ್ರೀಡೆ

ಜ.6, 7 ರಂದು ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ

Photo Credit :

ಜ.6, 7 ರಂದು ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ

ಮಡಿಕೇರಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಕ್ರೀಡಾ ಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜ.6 ಮತ್ತು 7 ರಂದು ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷರಾದ ಕೆ.ಬಿ.ರವಿ ಎರಡು ದಿನಗಳ ಕಾಲ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕ್ರೀಡಾ ಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಜ.6 ರಂದು ಶಾಸಕರಾದಿಯಾಗಿ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಕ್ರೀಡಾ ಕೂಟಕ್ಕೆ ಚಾಲನೆ ನೀಡಲಾಗುವುದು. ಪುರುಷರು ಹಾಗೂ ಮಹಿಳೆಯರಿಗಾಗಿ ಪ್ರತ್ಯೇಕ ವಿಭಾಗಗಳಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್ಬಾಲ್, ಕಬ್ಬಡಿ, ಕ್ರಿಕೆಟ್, ಚೆಸ್, ಷಟಲ್ ಬ್ಯಾಡ್ಮಿಂಟನ್, ಹಾಕಿ, ಬಾಸ್ಕೆಟ್ ಬಾಲ್, ಈಜು, ಟೆನ್ನಿಸ್, ಸಿಂಗಲ್ಸ್-ಡಬಲ್ಸ್ ಕೇರಂ, ಗುಂಡು ಎಸೆತ, ಡಿಸ್ಕಸ್ ಎಸೆತ, ಥ್ರೋಬಾಲ್, ಚೆಸ್ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ.

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹಿಂದೂಸ್ಥಾನಿ ಸಂಗೀತದಲ್ಲಿ ಮೌಖಿಕ ಮತ್ತು ಲಘು ಶಾಸ್ತ್ರೀಯ ಸಂಗೀತ, ಕರ್ನಾಟಕ ಸಂಗೀತದಲ್ಲಿ ಶಾಸ್ತ್ರೀಯ ಸಂಗೀತ ಹಾಗೂ ಲಘು ಶಾಸ್ತ್ರೀಯ ಸಂಗೀತ, ಶಾಸ್ತ್ರೀಯ ನೃತ್ಯದಲ್ಲಿ ಕಥಕ್, ಒಡಿಸ್ಸಿ, ಕಥಕಳಿ, ಕುಚುಪುಡಿ, ಮಣಿಪುರಿ, ಜಾನಪದ ನೃತ್ಯ, ವೈಯುಕ್ತಿಕ ಹಾಗೂ ತಂಡದ ಮೂಲಕ ಜಾನಪದ ಗೀತೆ, ಕರಕುಶಲ ವಸ್ತುಗಳ ಪ್ರದರ್ಶನ, ಹಿಂದೂಸ್ಥಾನಿ ಶಾಸ್ತ್ರೀಯ ಹಾಗೂ ಲಘು ಶಾಸ್ತ್ರೀಯ ಸಂಗೀತ, ಕಿರುನಾಟಕ, ಪರಕೇಶನ್ ವಾದ್ಯಗಳು ಜನರಲ್, ಸ್ಪ್ರಿಂಗ್ ವಾದ್ಯ ಸೇರಿದಂತೆ ಅನೇಕ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ ಎಂದು ಕೆ.ಬಿ.ರವಿ ತಿಳಿಸಿದರು.

ರಾಜ್ಯ ಸರಕಾರದ ಖಾಯಂ ನೌಕರರು, ಜಿ.ಪಂ, ಗ್ರಾ.ಪಂ ಮತ್ತು ಇತರ ಸ್ವಾಯತ್ತ ಸಂಸ್ಥೆಗಳಲ್ಲಿ ನಿಯೋಜನೆ ಮೇರೆಗೆ ಕಾರ್ಯ ನಿರ್ವಹಿಸುತ್ತಿರುವ ಸರಕಾರಿ ನೌಕರರು ಈ ಕ್ರೀಡಾ ಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಅವರು ಹೇಳಿದರು.

ಕ್ರೀಡಾ ಕೂಟದಲ್ಲಿ ಭಾಗವಹಿಸುವ ನೌಕರರಿಗೆ ಅನ್ಯ ಕಾರ್ಯ ನಿಮಿತ ಓಓಡಿ ನೀಡಲಾಗುತ್ತದೆ ಎಂದು ತಿಳಿಸಿದ ರವಿ, ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಕೂಟ ಜ.20 ರಿಂದ 22 ರವರೆಗೆ ಶಿವಮೊಗ್ಗದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದರು. ಹೆಚ್ಚಿನ ವಿವರಗಳಿಗೆ ಸಂಘದ ಕಚೇರಿ ಸಂಖ್ಯೆ 08272 228985 ನ್ನು ಸಂಪರ್ಕಿಸಬಹುದಾಗಿದೆ.
 ಸುದ್ದಿಗೋಷ್ಠಿಯಲ್ಲಿ ಸಂಘದ ರಾಜ್ಯ ಪರಿಷತ್ ಸದಸ್ಯರಾದ ಪಿ.ಡಿ.ರಾಜೇಶ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಟಿ.ಮುತ್ತಣ್ಣ ಹಾಗೂ ಉಪಾಧ್ಯಕ್ಷರಾದ ಅಯ್ಯಣ್ಣ ಉಪಸ್ಥಿತರಿದ್ದರು.

See also  ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಬೇಟೆ: ಶೂಟಿಂಗ್‌ನಲ್ಲಿ ಮತ್ತೆರಡು ಪದಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು