ಹೊಸದಿಲ್ಲಿ: ಮಾಜಿ ಸಂಸದ ನವಜೋತ್ ಸಿಂಗ್ ಸಿಧು ಬಿಜೆಪಿಗೆ ರಾಜೀನಾಮೆ ನೀಡಿದ್ದು, ಪಂಜಾಬ್ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಯುತ್ತಿದ್ದಂತೆ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಇಂದು ಮಧ್ಯಾಹ್ನ ಅಧಿಕೃತವಾಗಿ ಸೇರ್ಪಡೆಯಾದ ಸಿಧು, ರಾಹುಲ್ ಜತೆ ನಾಲ್ಕು ದಿನಗಳಲ್ಲಿ ಎರಡು ಬಾರಿ ಮಾತುಕತೆ ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಟ್ವೀಟ್ ಮಾಡಿ, ಕಾಂಗ್ರೆಸ್ ಪಕ್ಷಕ್ಕೆ ಸಿಧು ಅವರನ್ನು ಕರೆತಂದಿರುವುದಕ್ಕೆ ರಾಹುಲ್ ಗಾಂಧಿಯವರಿಗೆ ಧನ್ಯವಾದ, ಐಎನ್ಸಿ ನವಜೋತ್ ಸಿಂಗ್ ಸಿಧು ಅವರನ್ನು ಸ್ವಾಗತಿಸುತ್ತಿದೆ ಎಂದಿದ್ದಾರೆ.
ಇತ್ತೀಚೆಗೆ ಸಿಧು ಪತ್ನಿ ನವಜೋತ್ ಕೌರ್ ಕಾಂಗ್ರೆಸ್ಗೆ ಸೇರಿದ್ದು, ಇದರ ಬೆನ್ನಲ್ಲೇ ಸಿಧು ಅವರು ಕೂಡ ಕಾಂಗ್ರೆಸ್ಗೆ ಸೇರಲಿದ್ದಾರೆ ಎಂಬ ಸುದ್ದಿಗೆ ಇದೀಗ ತೆರೆ ಎಳೆದಂತಾಗಿದೆ.
ಸೆಪ್ಟೆಂಬರ್ ತಿಂಗಳು 2016ರಲ್ಲಿ ಸಿಧು ಬಿಜೆಪಿ ತೊರೆದಿದ್ದು, ಬಿಜೆಪಿ ಪಕ್ಷದಲ್ಲಿ ತನ್ನನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು.