ಮೈಸೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ಆಯೋಜಿಸಲಾದ 62ನೇ ರಾಜ್ಯಮಟ್ಟದ ಟೆನಿಸ್ ಪಂದ್ಯಾವಳಿಗೆ ಶಾಸಕ ಪಿ.ವಾಸು ಬಲೂನ್ ಹಾರಿ ಬಿಡುವ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಮೈಸೂರಿನಲ್ಲಿ ಕ್ರೀಡಾಕೂಟವನ್ನು ಆಯೋಜಿಸಲು ಅವಕಾಶ ಸಿಕ್ಕಿರುವುದು ಸಂತಸ ತಂದಿದೆ. ರಾಜ್ಯದ ಬೇರೆ, ಬೇರೆ ಕಡೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುತ್ತಿರುವುದು ತುಂಬಾ ಸಂತೋಷ ತಂದಿದೆ ಎಂದರು.
ವಿದ್ಯಾರ್ಥಿಗಳು ಈಗ ರಾಜ್ಯಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ತೋರಿಸುತ್ತಿದ್ದೀರಿ. ಮುಂದೆ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ. ಮೈಸೂರಿನಲ್ಲಿ ಮಹಾರಾಜರ ಕಾಲದಿಂದಲೂ ಕ್ರೀಡೆಗೆ ಪ್ರೋತ್ಸಾಹ ದೊರಕುತ್ತಿದೆ. ಇದೀಗ ಮತ್ತೊಂದು ಐತಿಹಾಸಿಕ ಕ್ರೀಡೆಗೆ ಸಜ್ಜಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ, ಟೆನ್ನಿಸ್ ಕ್ಲಬ್ ಅಧ್ಯಕ್ಷ ಅಲಗಪ್ಪನ್, ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಫಿಲೋಮಿನಾ ಲೋಬೋ, ದೈಹಿಕ ಶಿಕ್ಷಣಾಧಿಕಾರಿ ಸಿ.ಮರಿಯಪ್ಪ ಮತ್ತಿತರರು ಉಪಸ್ಥಿತರಿದ್ದರು.