ಢಾಕಾ: ಬಾಂಗ್ಲಾದೇಶ ಕ್ರಿಕೆಟಿಗ ಅರಾಫತ್ ಸನ್ನಿ ತನ್ನ ಗೆಳತಿಯ ಸೂಕ್ಷ್ಮ ಫೋಟೋಗಳನ್ನು ನಕಲಿ ಫೇಸ್ ಬುಕ್ ಖಾತೆಗೆ ಅಪ್ಲೋಡ್ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಈತನನ್ನು ಬಂಧಿಸಿದ್ದಾರೆ.
ಪ್ರಕರಣದ ತನಿಖೆ ನಡೆಸಿದ್ದ ಮಹಮದ್ ಪುರ ಪೊಲೀಸರು ಸೈಬರ್ ಪೊಲೀಸರು ನೀಡಿದ ಮಾಹಿತಿ ಮೇರೆಗೆ ಅರಾಫತ್ ಸನ್ನಿಯನ್ನು ಭಾನುವಾರ ಬಂಧಿಸಿದ್ದು, ಮೂಲಗಳ ಪ್ರಕಾರ ಕ್ರಿಕೆಟಿಗ ಅರಾಫತ್ ಸನ್ನಿ ತನ್ನ ಗೆಳತಿಯ ರಹಸ್ಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ ಎಂದು ಯುವತಿ ದೂರು ನೀಡಿದ್ದಳು.
ಅರಾಫತ್ 16 ಏಕದಿನ ಹಾಗೂ 10 ಟಿ20 ಪಂದ್ಯಗಳನ್ನು ಆಡಿದ್ದು, 2016ರಲ್ಲಿ ಭಾರತದಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕೊನೆಯ ಸಲ ಸನ್ನಿ ಬಾಂಗ್ಲೇದಶ ತಂಡವನ್ನು ಪ್ರತಿನಿಧಿಸಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್ ಗೆ 2014ರಲ್ಲಿ ಪದಾರ್ಪಣೆ ಮಾಡಿದ್ದರು.
ಪ್ರಸ್ತುತ ಅರಾಫತ್ ಸನ್ನಿಯನ್ನು ಐದು ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆದಿದ್ದು, ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ (ಐಸಿಟಿ) ಕಾಯ್ದೆಯಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.