ಮೂಡುಬಿದಿರೆ: ಮಹಾರಾಷ್ಟ್ರದ ಅಹಮದ್ ನಗರದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ರಾಷ್ಟ್ರಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಮಮತಾ 45ಕೆಜಿ ದೇಹತೂಕ ಹಾಗೂ ಹರ್ಷಿತಾ 50ಕೆಜಿ ದೇಹತೂಕದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ವಿಜೇತ ಕ್ರೀಡಾಪಟುಗಳಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರವರು ಅಭಿನಂದಿಸಿದ್ದಾರೆ.