ಬೆಂಗಳೂರು: ಟೀಂ ಇಂಡಿಯಾದ ಸ್ಪಿನ್ ಬೌಲರ್ಗಳ ಅತ್ಯುತ್ತಮ ಪ್ರದರ್ಶನದಿಂದ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ 75 ರನ್ಗಳ ರೋಚಕ ಗೆಲುವು ದಾಖಲಿಸಿದೆ.
ಟೀಂ ಇಂಡಿಯಾದ ಸ್ಪಿನ್ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ ಎರಡನೇ ಇನಿಂಗ್ಸ್ನಲ್ಲಿ ಕೇವಲ 112 ರನ್ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಸೋಲಿಗೆ ಶರಣಾಯಿತು.
ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ಗಳು 188ರನ್ಗಳ ಗೆಲುವಿನ ಗುರಿಯನ್ನು ಬೆನ್ನತ್ತಿ ಭಾರತದ ಸ್ಪಿನ್ ಬೌಲರ್ಗಳ ಮಾರಕ ದಾಳಿಗೆ ತತ್ತರಿಸಿದರು. ಭಾರತ ತಂಡದ ಪರ ಆರ್. ಅಶ್ವಿನ್ 6 ವಿಕೆಟ್ ಕಬಳಿಸುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಸ್ಕೋರ್ ವಿವರ:
ಭಾರತ ಮೊದಲ ಇನ್ನಿಂಗ್ಸ್: 189-10 (71.2)
ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್: 276-10 (122.4)
ಭಾರತ ಎರಡನೇ ಇನ್ನಿಂಗ್ಸ್: 274-10 (97.1)
ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್: 112-10 (35.4)
ಭಾರತಕ್ಕೆ 75 ರನ್ಗಳ ಜಯ