ಹೊಸದಿಲ್ಲಿ: ದ್ವಾರಕಾದ ವೆಲ್ ಕಮ್ ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಈ ಹೋಟೆಲ್ ನಲ್ಲಿ ಭಾರತದ ತಂಡ ಮಾಜಿ ನಾಯಕ ಎಂ ಎಸ್ ಧೋನಿ ಮತ್ತು ಜಾರ್ಖಂಡ್ ತಂಡ ವಾಸ್ತವ್ಯ ಹೂಡಿದ್ದರು. ಈ ಎಲ್ಲಾ ಆಟಗಾರರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಕ್ರಿಕೆಟಿಗಿರು ವಾಸ್ತವ್ಯ ಹೂಡಿದ್ದ ಹೋಟೆಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ ಹಿನ್ನಲೆಯಲ್ಲಿ ವಿಜಯ್ ಹಜಾರೆ ಟ್ರೋಫಿ 2ನೇ ಸೆಮಿಫೈನಲ್ ಪಂದ್ಯವನ್ನು ಶನಿವಾರಕ್ಕೆ ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿವೆ.