News Kannada
Monday, February 06 2023

ಕ್ರೀಡೆ

ಮೂರನೇ ಟೆಸ್ಟ್: ಭರ್ಜರಿ ದ್ವಿಶತಕ ಸಿಡಿಸಿದ ಚೇತೇಶ್ವರ ಪೂಜಾರ

Photo Credit :

ಮೂರನೇ ಟೆಸ್ಟ್: ಭರ್ಜರಿ ದ್ವಿಶತಕ ಸಿಡಿಸಿದ ಚೇತೇಶ್ವರ ಪೂಜಾರ

ರಾಂಚಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೂರನೇ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಚೇತೇಶ್ವರ ಪೂಜಾರ ಭರ್ಜರಿ ದ್ವಿಶತಕ ಭಾರಿಸಿದ್ದಾರೆ.

ಚೇತೇಶ್ವರ ಪೂಜಾರ 202 ರನ್ ಸಿಡಿಸಿ ಭಾರತಕ್ಕೆ ಭರ್ಜರಿ ಮುನ್ನಡೆ ತಂದುಕೊಟ್ಟಿದ್ದು, ರಾಂಚಿಯ ಜೆಎಸ್ಸಿಎ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ  ಪೂಜಾರ ಈ ಸಾಧನೆಯನ್ನು ಮಾಡಿದ್ದಾರೆ.

ಪೂಜಾರ ಮೂರು ದ್ವಿಶತಕಗಳನ್ನು ಸಿಡಿಸಿದ್ದು 43 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಅಹಮದಾಬಾದ್ ನ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ 2012ರಲ್ಲಿ  ನಡೆಯದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಪೂಜಾರ (ಅಜೇಯ 206 ರನ್) ಸಿಡಿಸುವ ಮೂಲಕ  ಮೊದಲ ಟೆಸ್ಟ್ ದ್ವಿಶತಕ, ಹೈದರಾಬಾದ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ 2013ರಲ್ಲಿ ನಡೆದ ಪಂದ್ಯದಲ್ಲಿ 204 ರನ್ ಸಿಡಿಸುವ ಮೂಲಕ ಎರಡನೇ  ದ್ವಿಶತಕ, ಮತ್ತೆ ಆಸ್ಟ್ರೇಲಿಯಾ ವಿರುದ್ಧ 202 ರನ್ ಗಳಿಸುವ ಮೂಲಕ ಮೂರನೇ ಅಂತಾರಾಷ್ಟ್ರೀಯ ದ್ವಿಶತಕವನ್ನು ಪೂಜಾರ ಸಿಡಿಸಿದ್ದಾರೆ.

See also  ಐಎಸ್ಎಸ್ಎಫ್ ವಿಶ್ವಕಪ್ ಟೂರ್ನಿ: ಜಿತು ರೈ ಸ್ವರ್ಣ, ಅಮನ್ ಪ್ರೀತ್ ಸಿಂಗ್ ಬೆಳ್ಳಿ ಪದಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು