ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ ಸಿಬಿ) ತಂಡದ ಸ್ಟಾರ್ ಆಟಗಾರ ಎಬಿ ಡಿವಿಲಿಯರ್ಸ್ 10ನೇ ಆವೃತ್ತಿಯಲ್ಲಿ ಕೀಪಿಂಗ್ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ನನಗೆ ಅತೀವವಾದ ಬೆನ್ನು ನೋವು ಕಾಣಿಸಿಕೊಳ್ಳುತ್ತಿದ್ದು ಹಲವು ವರ್ಷಗಳಿಂದ ಕೀಪಿಂಗ್ ಮಾಡಿದ್ದರಿಂದಾಗಿದೆ. ಹೀಗಾಗಿ ಇನ್ನು ಮುಂದೆ ಕೀಪಿಂಗ್ ಮಾಡಬಾರದು ಎಂದು ತೀರ್ಮಾನಿಸಿದ್ದೇನೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದ ಎಬಿ ಡಿವಿಲಿಯರ್ಸ್ ಖಂಡಿತವಾಗಿಯೂ ನಾನು ವಿಕೆಟ್ ಕೀಪಿಂಗ್ ಮಾಡುವುದರಿಂದ ದೂರ ಉಳಿಯಲಿದ್ದೇನೆ ಎಂದು ಅವರು ತಿಳಸಿದರು.