News Kannada
Wednesday, October 05 2022

ಕ್ರೀಡೆ

ಕೊಡಗು ಮುಸ್ಲಿಂ ಕ್ರಿಕೆಟ್ ಕಪ್ ಪಂದ್ಯಾವಳಿಗೆ ನಾಳೆ ಚಾಲನೆ: 85 ತಂಡಗಳ ನಡುವೆ ಪ್ರಶಸ್ತಿಗಾಗಿ ಹಣಾಹಣಿ - 1 min read

Photo Credit :

ಕೊಡಗು ಮುಸ್ಲಿಂ ಕ್ರಿಕೆಟ್ ಕಪ್ ಪಂದ್ಯಾವಳಿಗೆ ನಾಳೆ ಚಾಲನೆ: 85 ತಂಡಗಳ ನಡುವೆ ಪ್ರಶಸ್ತಿಗಾಗಿ ಹಣಾಹಣಿ

ಮಡಿಕೇರಿ: ಕೊಡಗು ಜಿಲ್ಲಾ ಮುಸ್ಲಿಂ ಸ್ಪೋರ್ಟ್ಸ್ ಅಸೋಸಿಯೇಷನ್ ಹಾಗೂ ತಾಜ್ ಕ್ರ್ರಿಕೆಟರ್ಸ್ ವತಿಯಿಂದ 14ನೇ ವರ್ಷದ ಕೊಡಗು ಮುಸ್ಲಿಂ ಕ್ರಿಕೆಟ್ ಕಪ್ ಪಂದ್ಯಾವಳಿ ಏ.26 ರಿಂದ 30ರವರೆಗೆ ಕುಶಾಲನಗರದ ಜಿಎಂಪಿ ಶಾಲಾ ಮೈದಾನದಲ್ಲಿ ನಡೆಯಲಿದೆ. ಸುಮಾರು 85 ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿವೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ನ ಕಾರ್ಯದರ್ಶಿ ಸೈಫಾಲಿ, ಐದು ದಿನಗಳ ಕಾಲ ನಡೆಯಲಿರುವ ಕ್ರಿಕೆಟ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದರು. ಏ.26 ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್. ಸೀತಾರಾಮ್ ಅವರು ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ತಾಜ್ ಕ್ರಿಕೆಟರ್ಸ್ ನ ಅಧ್ಯಕ್ಷರಾದ ಅಂಝದ್ ಹುಸೇನ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಸ್ಲಿಂ ಕ್ರಿಕೆಟ್ ಕಪ್ ನ ಸ್ಥಾಪಕರಾದ ಅಬ್ದುಲ್ ರಶೀದ್ ಎಡಪಾಲ, ಪ್ರಾಯೋಜಕರಾದ ಉದ್ಯಮಿ ನಾಪಂಡ ಮುತ್ತಪ್ಪ, ಆಹಾರ ಖಾತೆ ಸಚಿವರಾದ ಯು.ಟಿ. ಖಾದರ್, ಪಶುಪಾಲನಾ ಖಾತೆ ಸಚಿವರಾದ ಎ. ಮಂಜು, ಶಾಸಕರುಗಳಾದ ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಮೊಯ್ದೀನ್ ಬಾವ, ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯರುಗಳಾದ, ವೀಣಾ ಅಚ್ಚಯ್ಯ, ಸುನಿಲ್ ಸುಬ್ರಮಣಿ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷರುಗಳಾದ ಬಿ.ಎ. ಹರೀಶ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ಏಪ್ರಿಲ್ 30 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಕುಶಾಲನಗರ ಪಟ್ಟಣ ಪಂಚಾಯ್ತಿ ಅಧ್ಯಕ್ಷರಾದ ಎಂ.ಎಂ. ಚರಣ್, ವಕ್ಫ್ ಮಂಡಳಿ ಅಧ್ಯಕ್ಷರಾದ ಅಬ್ದುಲ್ ರೆಹೆಮಾನ್, ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರಾದ ವಿ.ಪಿ. ಶಶಿಧರ್, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಅಬ್ದುಲ್ ಲತೀಫ್, ನಾಪೋಕ್ಲು ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಇಸ್ಮಾಯಿಲ್, ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷರಾದ ಟಿ.ಆರ್. ಶರವಣ್, ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷರಾದ ಯಾಕೂಬ್, ಕೊಡವ ಮುಸ್ಲಿಂ ಅಸೋಸಿಯೇಷನ್ ಅಧ್ಯಕ್ಷರಾದ ಡಿ.ಹೆಚ್. ಸೂಫಿ, ಬೆಂಗಳೂರು ಆರ್ಟಿಒ ನಾಸಿರ್, ಕೊಡಗು ಮುಸ್ಲಿಂ ಸಮಾಜದ ಅಧ್ಯಕ್ಷರಾದ ಕೆ.ಎಂ.ಇಬ್ರಾಹಿಂ ಮಾಸ್ಟರ್, ಕೊಡಗು ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಮೊಹಮ್ಮದ್ ರಫಿ, ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಮನ್ಸೂರ್ ಆಲಿ ಮತ್ತಿತರ ಪ್ರಮುಖರು ಉಪಸ್ಥಿತರಿರುವರು ಎಂದು ಸೈಫಾಲಿ ತಿಳಿಸಿದರು.

ಕಳೆದ ವರ್ಷ 67 ತಂಡಗಳು ಪಾಲ್ಗೊಂಡಿದ್ದು, ಈ ಬಾರಿ 85 ತಂಡಗಳು ಪ್ರಶಸ್ತಿಗಾಗಿ ಹಣಾಹಣಿ ನಡೆಸಲಿವೆ. ವಿನ್ನರ್ಸ್ ಗೆ ರೂ.50 ಸಾವಿರ ಹಾಗೂ ರನ್ನರ್ಸ್ ಗೆ ರೂ.25 ಸಾವಿರ ನಗದು ಬಹುಮಾನ ನೀಡಲಾಗುವುದೆಂದರು.

ಸುದ್ದಿಗೋಷ್ಠಿಯಲ್ಲಿ ಅಸೋಸಿಯೇಷನ್ ಅಧ್ಯಕ್ಷರಾದ ಅಬ್ದುಲ್ ಖಾದರ್, ನಿರ್ದೇಶಕರಾದ ರಷೀದ್ ಎಡಪಾಲ, ಅಬ್ದುಲ್ ಖಾದರ್, ಹ್ಯಾರೀಸ್, ಜೈನುಲ್ ಉಪಸ್ಥಿತರಿದ್ದರು.

See also  ಟೀ ಮಾರುವವರ ಮಗ ಕರಾಟೆಯಲ್ಲಿ ಚಾಂಪಿಯನ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು