ಮಡಿಕೇರಿ: ಮೂರ್ನಾಡು ಹೋಬಳಿ ಬಂಟರ ಸಂಘದಿಂದ ಮೇ.20-21 ರಂದು ಮೂರ್ನಾಡಿನ ಪ್ರೌಢ ಶಾಲಾ ಮೈದಾನದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಸಂಘದ ಸಲಹೆಗಾರ ಬಾಲಕೃಷ್ಣ ರೈ ತಿಳಿಸಿದ್ದಾರೆ.
ಪುರುಷರಿಗೆ ಕ್ರಿಕೆಟ್ ಮತ್ತು ಹಗ್ಗಜಗ್ಗಾಟ, ಮಹಿಳೆಯರಿಗೆ ಥ್ರೋಬಾಲ್, ಹಗ್ಗಜಗ್ಗಾಟ, ನಿಂಬೆ ಹಣ್ಣು ಓಟ ಮತ್ತು ಸಂಗೀತ ಕುರ್ಚಿ ಕ್ರೀಡೆಗಳನ್ನು ನಡೆಸಲು ತೀರ್ಮಾನಿಸಿದ್ದು, ಮೇ.15ರೊಳಗಾಗಿ ಹೆಸರುಗಳನ್ನು ನೊಂದಾಯಿಸಿಕೊಳ್ಳುವಂತೆ ತಿಳಿಸಿದ್ದಾರೆ. ಕ್ರಿಕೆಟ್ ಪಂದ್ಯಾಟಕ್ಕೆ ಈಗಾಗಲೇ 24 ತಂಡಗಳು ತಮ್ಮ ಹೆಸರನ್ನು ನೊಂದಾಯಿಸಿಕೊಂಡಿದ್ದು ವಿಜೇತ ತಂಡಗಳಿಗೆ ಬಹುಮಾನಗಳಾಗಿ ನಗದು ಮತ್ತು ಆಕರ್ಷಕ ಟ್ರೋಫಿಗಳನ್ನು ವಿತರಿಸಲಾಗುವುದೆಂದು ತಿಳಿಸಿದ್ದಾರೆ. ಆಸಕ್ತರು ಗಿರೀಶ್ ರೈ 9448647849, ಕುಶನ್ ರೈ 8095573808 ಕರೆ ಮಾಡಿ ಹೆಚ್ಚಿನ ಮಾಹಿತಿಗಾಗಿ ಸಂರ್ಪಕಿಸಬಹುದೆಂದು ತಿಳಿಸಿದ್ದಾರೆ.