ಆಂಟಿಗಾ: ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ನಾಲ್ಕನೇ ಪಂದ್ಯದಲ್ಲಿ ಆತಿಥೇಯ ಕೆರಿಬಿಯನ್ ತಂಡದ ವಿರುದ್ಧ ಸೋಲು ಕಂಡಿದೆ. ಚುರುಕು ಬೌಲಿಂಗ್ ದಾಳಿಯಿಂದ ವಿಂಡೀಸ್ ತಂಡ ಭಾರತ ವಿರುದ್ಧ 11 ರನ್‌ಗಳ ಗೆಲುವು ಸಾಧಿಸಿದೆ.
ಐದು ಏಕದಿನ ಪಂದ್ಯಗಳ ಸರಣಿಯ ನಾಲ್ಕನೇ ಪಂದ್ಯ ಆಂಟಿಗಾದಲ್ಲಿ ಭಾನುವಾರ ನಡೆಯಿತು. ಟಾಸ್ ಗೆದ್ದ ಕೆರಿಬಿಯನ್ ತಂಡದ ನಾಯಕ ಜೇಸನ್ ಹೋಲ್ಡರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. 50 ಓವರ್ ಗಳಲ್ಲಿ ವಿಂಡೀಸ್ ತಂಡ 9 ವಿಕೆಟ್ ನಷ್ಟಕ್ಕೆ 189 ರನ್ ಕಲೆಹಾಕಿತು. ಈ ಸಾಧಾರಣ ಗುರಿ ಬೆನ್ನತ್ತಿದ ಕೊಹ್ಲಿ ಪಡೆ 49.4 ಓವರ್ ಗಳಲ್ಲಿ 178 ರನ್ ಗಳಿಸಿ ಸರ್ವಪತನಗೊಂಡಿತು. ಈ ಮೂಲಕ ವೆಸ್ಟ್ ಇಂಡೀಸ್ 11 ರನ್ ಗಳ ಗೆಲುವು ಪಡೆಯಿತು.
ಐದು ಪಂದ್ಯಗಳಲ್ಲಿ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಎರಡು ಹಾಗೂ ಮೂರನೇ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿತ್ತು. ನಾಲ್ಕನೇ ಪಂದ್ಯದಲ್ಲಿ ಕೆರಿಬಿಯನ್ ತಂಡ ಜಯ ದಾಖಲಿಸುವ ಮೂಲಕ ಸರಣಿಯಲ್ಲಿ 2-1 ಅಂತರವನ್ನು ಕಡಿಮೆ ಮಾಡಿಕೊಂಡಿತು.