News Kannada
Tuesday, November 29 2022

ಕ್ರೀಡೆ

ಆಗಸ್ಟ್ 12ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ - 1 min read

Photo Credit :

ಆಗಸ್ಟ್ 12ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ

ಮಡಿಕೇರಿ: ಆಗಸ್ಟ್ 12ರಂದು ರಾಜ್ಯಮಟ್ಟದ ಕೆಸರು ಗದ್ದೆ ಕ್ರೀಡಾಕೂಟ ಕಗ್ಗೋಡ್ಲು ಗ್ರಾಮದ ಸಿ.ಡಿ.ಬೋಪಯ್ಯ ಅವರ ಗದ್ದೆಯಲ್ಲಿ ನಡೆಯಲಿದೆ.ಈಗಾಗಲೇ ಸ್ಪರ್ಧೆಗಳಲ್ಲಿ ಭಾಗವಹಿಸುವ ತಂಡಗಳ ನೋಂದಣಿ ಕಾರ್ಯ ನಡೆಯುತ್ತಿದೆ. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು, ವೈಯಕ್ತಿಕ ಮತ್ತು ತಂಡಗಳ ಹೆಸರನ್ನು ನೋಂದಾಯಿಸಿಕೊಂಡು ಭಾಗವಹಿಸಬಹುದಾಗಿದೆ. ಈ ಕ್ರೀಡಾಕೂಟವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಯೂತ್ ಹಾಸ್ಟೇಲ್ ಅಸೋಸಿಯೇಶನ್ ಆಫ್ ಇಂಡಿಯಾ, ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕು ಯುವ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ನಡೆಸಲಾಗುತ್ತಿದ್ದು,

ಈ ಕ್ರೀಡಾಕೂಟದಲ್ಲಿ ವಾಲಿಬಾಲ್ ಪುರುಷರ ವಿಭಾಗ (4 ಜನರ ತಂಡ), ಥ್ರೋಬಾಲ್ ಮಹಿಳೆಯರ ವಿಭಾಗ (5 ಜನರ ತಂಡ), ಹಗ್ಗ ಜಗ್ಗಾಟ ಪುರುಷರ ವಿಭಾಗ (9 ಜನರ ತಂಡ), ಹಗ್ಗ ಜಗ್ಗಾಟ ಮಹಿಳೆಯರ ವಿಭಾಗ (9 ಜನರ ತಂಡ), ಹಗ್ಗ ಜಗ್ಗಾಟ ಪ್ರೌಢಶಾಲಾ ಬಾಲಕರಿಗೆ (9 ಜನರ ತಂಡ), ಹಗ್ಗ ಜಗ್ಗಾಟ ಪ್ರೌಢಶಾಲಾ ಬಾಲಕಿಯರಿಗೆ (9 ಜನರ ತಂಡ). ಕಿರಿಯ ಪ್ರಾಥಮಿಕ ಶಾಲಾ ಬಾಲಕರಿಗೆ 50ಮೀ ಓಟ, ಕಿರಿಯ ಪ್ರಾಥಮಿಕ ಶಾಲಾ ಬಾಲಕಿಯರಿಗೆ 50ಮೀ ಓಟ, ಹಿರಿಯ ಪ್ರಾಥಮಿಕ ಶಾಲಾ ಬಾಲಕರಿಗೆ 100ಮೀ ಓಟ, ಹಿರಿಯ ಪ್ರಾಥಮಿಕ ಶಾಲಾ ಬಾಲಕಿಯರಿಗೆ 100ಮೀ ಓಟ, ಪ್ರೌಢ ಶಾಲಾ ಬಾಲಕರಿಗೆ 200ಮೀ ಓಟ, ಪ್ರೌಢ ಶಾಲಾ ಬಾಲಕಿಯರಿಗೆ 200ಮೀ ಓಟ, ಪದವಿಪೂರ್ವ ಕಾಲೇಜು ಬಾಲಕರಿಗೆ 300 ಮೀ.ಓಟ, ಪದವಿ ಪೂರ್ವ ಕಾಲೇಜು ಬಾಲಕಿಯರಿಗೆ 300 ಮೀ.ಓಟ, ಪ್ರಾಥಮಿಕ, ಪೌಢ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ರಿಲೇ ಓಟ, ಸಾರ್ವಜನಿಕ ಪುರುಷರ ಮುಕ್ತ ಓಟ, ಸಾರ್ವಜನಿಕ ಮಹಿಳೆಯರ ಮುಕ್ತ ಓಟ, ಕಗ್ಗೋಡ್ಲು ಗ್ರಾಮಸ್ಥರಿಗೆ ಸಾಂಪ್ರದಾಯಿಕ ನಾಟಿ ಓಟ ನಡೆಯಲಿದೆ.

ಪ್ರಥಮ ಹಾಗೂ ದ್ವೀತಿಯ ಸ್ಥಾನ ಗಳಿಸುವ ಕ್ರೀಡಾ ತಂಡಗಳಿಗೆ ಆಕರ್ಷಕ ಪಾರಿತೋಷಕ ಮತ್ತು ನಗದು ಬಹುಮಾನವನ್ನು ನೀಡಲಾಗುವುದು. ಪ್ರೌಢಶಾಲಾ ವಿಭಾಗದ ಹಗ್ಗ ಜಗ್ಗಾಟದಲ್ಲಿ ಭಾಗವಹಿಸುವವರು ತಮ್ಮ ವಿದ್ಯಾ ಸಂಸ್ಥೆಯ ಮುಖ್ಯಸ್ಥರಿಂದ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ತರಬೇಕಾಗುತ್ತದೆ.
ಓಟದ ಸ್ಪರ್ಧೆಯಲ್ಲಿ ಪ್ರಥಮ, ದ್ವೀತಿಯ ಹಾಗೂ ತೃತೀಯ ಪಾರಿತೋಷಕಗಳನ್ನು ಮತ್ತು ಪ್ರಶಂಸನಾ ಪತ್ರವನ್ನು ನೀಡಲಾಗುವುದು. ಕ್ರೀಡಾಕೂಟ ಮತ್ತು ವಿವಿಧ ಆಟೋಟ ಸ್ಪರ್ಧೆಗಳು ಬೆಳಗ್ಗೆ 9ರಿಂದಲೇ ಆರಂಭಗೊಳ್ಳಲಿದೆ. ಹೆಚ್ಚಿನ ವಿವರಗಳಿಗೆ 9449952008, 9740404520, 9901316315, 9480674546, 9481213920ನ್ನು ಸಂಪರ್ಕಿಸಬಹುದಾಗಿದೆ.

See also  ರಾಜಸ್ಥಾನ್ ರಾಯಲ್ಸ್ ನಾಯಕತ್ವ ಕಳಕೊಂಡ ಸ್ಟೀವ್ ಸ್ಮಿತ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು