ಇಂದೋರ್: ಐಸಿಸಿ ಟೆಸ್ಟ್ ರಾಂಕಿಂಗ್‌ನಲ್ಲಿ ಮೊದಲನೇ ಸ್ಥಾನದಲ್ಲಿರುವ ಟೀಂ ಇಂಡಿಯಾ, ಇದೀಗ ಏಕದಿನ ರಾಂಕಿಂಗ್‌ನಲ್ಲೂ ನಂಬರ್ 1 ಸ್ಥಾನವನ್ನು ಮುಡಿಗೇರಿಸಿಕೊಂಡಿದೆ.
ಇಂದೋರ್ನಲ್ಲಿ ಭಾನುವಾರ ನಡೆದ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ 3ನೇ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸುವ ಮೂಲಕ ಟೀಂ ಇಂಡಿಯಾ ಏಕದಿನ ರಾಂಕಿಂಗ್ನಲ್ಲೂ 120 ಅಂಕಗಳನ್ನು ಪಡೆದುಕೊಂಡಿತು. ಈ ಮೂಲಕ119 ಅಂಕಗಳೊಂದಿಗೆ ನಂಬರ್ 1 ಸ್ಥಾನದಲ್ಲಿದ್ದ ದಕ್ಷಿಣ ಆಫ್ರಿಕಾ ತಂಡವನ್ನು ಟೀಂ ಇಂಡಿಯಾ ಹಿಂದಿಕ್ಕಿ ಏಕದಿನ ತಂಡ ರಾಂಕಿಂಗ್ ಪಟ್ಟಿಯಲ್ಲೂ ಅಗ್ರಸ್ಥಾನಕ್ಕೇರಿದೆ.