News Kannada
Wednesday, December 07 2022

ಕ್ರೀಡೆ

ಬೆಂಗಳೂರು ವಿರುದ್ಧ ಚೆನ್ನೈಗೆ ಭರ್ಜರಿ ಗೆಲುವು

Photo Credit :

ಬೆಂಗಳೂರು ವಿರುದ್ಧ ಚೆನ್ನೈಗೆ ಭರ್ಜರಿ ಗೆಲುವು

ಪುಣೆ: ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ಬೆಂಗಳೂರು ರಾಯಲ್ ಚಾಲೆಂಜರ್ಸ್ ನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕಿ ಆರು ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿಕೊಂಡಿದೆ.

ಟಾಸ್ ಸೋತು ಬ್ಯಾಟಿಂಗಿಗೆ ಇಳಿಸಲ್ಪಟ್ಟ ಬೆಂಗಳೂರು 9 ವಿಕೆಟ್ ಕಳಕೊಂಡು ಕೇವಲ 127 ರನ್ ಮಾಡಲಷ್ಟೇ ಶಕ್ತವಾಯಿತು. ಇದಕ್ಕೆ ಉತ್ತರಿಸಿದ ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕು ವಿಕೆಟ್ ಕಳಕೊಂಡು 128 ರನ್ ಮಾಡಿ ಎರಡು ಓವರ್ ಬಾಕಿ ಇರುವಂತೆ ಸುಲಭ ಗೆಲುವು ದಾಖಲಿಸಿಕೊಂಡಿತು.

18 ರನ್ ಗಳಿಗೆ ಮೂರು ವಿಕೆಟ್ ಉರುಳಿಸಿದ ರವೀಂದ್ರ ಜಡೇಜಾ ಅವರು ಬೆಂಗಳೂರಿಗೆ ದೊಡ್ಡ ಆಘಾತ ನೀಡಿದರು. ಪಾರ್ಥಿವ್ ಪಟೇಲ್ 53 ರನ್ ಹೊರತುಪಡಿಸಿ ಬೆಂಗಳೂರಿನ ಇತರ ಬ್ಯಾಟ್ಸ್ ಮೆನ್ ಗಳು ಸಂಪೂರ್ಣವಾಗಿ ವಿಫಲರಾದರು.

ಸಿಎಸ್ ಕೆಗೆ ಅಂಬಟಿ ರಾಯುಡು ಉತ್ತಮ ಆರಂಭ ಒದಗಿಸಿಕೊಟ್ಟರು. 25 ಎಸೆತಗಳಲ್ಲಿ 32 ರನ್ ಬಾರಿ ತಂಡಕ್ಕೆ ಭರ್ಜರಿ ಆರಂಭ ನೀಡಿದರು. ಅಂತ್ಯದಲ್ಲಿ ಸತತ ಮೂರು ಸಿಕ್ಸರ್ ಸಿಡಿಸಿದ ಕಪ್ತಾನ ಮಹೇಂದ್ರ ಸಿಂಗ್ ಧೋನಿ 18ನೇ ಓವರ್ ನಲ್ಲಿ ಗೆಲುವು ತಂದುಕೊಟ್ಟರು.

See also  ಐಸಿಸಿ ಟಿ-20 ರ‍್ಯಾಂಕಿಂಗ್‌ನಲ್ಲಿ ಐದನೇ ಸ್ಥಾನಕ್ಕೆ ಜಿಗಿದ ವಿರಾಟ್ ಕೊಹ್ಲಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು