ದುಬೈ: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ನಲ್ಲಿ ಶತಕ ಬಾರಿಸಿ ಉತ್ತಮ ಪ್ರದರ್ಶನ ನೀಡಿರುವ ಟೀಂ ಇಂಡಿಯಾ ಕಪ್ತಾನ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.
ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಹಿಂದಿಕ್ಕಿದ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಸಚಿನ್ ತೆಂಡೂಲ್ಕರ್ ಬಳಿಕ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿದ ಮೊದಲ ಭಾರತೀಯ ಆಟಗಾರನಾಗಿದ್ದಾರೆ.
ಕೊಹ್ಲಿ ನಿನ್ನೆ ಕೊನೆಗೊಂಡ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ನಲ್ಲಿ 149 ರನ್ ಮತ್ತು 51 ರನ್ ಬಾರಿಸಿದ್ದರು.
ಆಸ್ಟ್ರೇಲಿಯಾದ ಆಟಗಾರನಿಗಿಂತ ಕೊಹ್ಲಿ ಐದು ಅಂಕ ಹೆಚ್ಚು ಪಡೆದುಕೊಂಡಿದ್ದಾರೆ. ಇನ್ನುಳಿದ ನಾಲ್ಕು ಟೆಸ್ಟ್ ಗಳಲ್ಲಿ ಕೊಹ್ಲಿ ಉತ್ತಮ ಪ್ರದರ್ಶನ ನೀಡಿದರೆ ಈ ಸ್ಥಾನ ಕಾಯ್ದುಕೊಳ್ಳಬಹುದು.