ನವದೆಹಲಿ: ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ವರದಿಗಳು ಹೇಳಿವೆ.
ಈಗಾಗಲೇ ಬಿಜೆಪಿಯು ಕೆಲವೊಂದು ಸಿನಿಮಾ ತಾರೆಯರು ಹಾಗು ಕ್ರಿಕೆಟಿಗರಿಗೆ ಟಿಕೆಟ್ ನೀಡಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಗೌತಮ್ ಗಂಭೀರ್ ಅವರು ದೆಹಲಿಯ ಒಂದು ಕ್ಷೇತ್ರದಿಂದ ಸ್ಪರ್ಧಿಸಲಿರುವರು ಎಂದು ವರದಿಗಳು ತಿಳಿಸಿವೆ.
ಬಿಜೆಪಿಯ ಮೀನಾಕ್ಷಿ ಲೇಖಿ ಅವರು ನವದೆಹಲಿ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದು, ಇದೇ ಕ್ಷೇತ್ರದಿಂದ ಗಂಭೀರ್ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ಹೇಳಿರುವುದಾಗಿ ವರದಿಯಾಗಿದೆ.
ದೆಹಲಿಯಲ್ಲಿ ಏಳು ಕ್ಷೇತ್ರಗಳಿದ್ದು, ಗಂಭೀರ್ ಗೆ ಮೀನಾಕ್ಷಿ ಲೇಖಿ ಸ್ಥಾನ ಬಿಟ್ಟುಕೊಟ್ಟರೆ ಅವರು ಬೇರೆ ಕ್ಷೇತ್ರದಿಂದ ಸ್ಪರ್ಧಿಸುವರು.