ನವದೆಹಲಿ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರಿಗೆ ಉಗ್ರರ ದಾಳಿಯ ಭೀತಿಯಿದೆ ಎಂದು ರಾಷ್ಟ್ರೀಯ ತನಿಖಾ ದಳ(ಎನ್ ಐಎ) ಹೇಳಿದೆ.
ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಟಿ-20 ಪಂದ್ಯದ ವೇಳೆ ಭದ್ರತೆ ಹೆಚ್ಚಿಸುವಂತೆ ಎನ್ ಐಎ ದೆಹಲಿ ಪೊಲೀಸರಿಗೆ ಸೂಚಿಸಿದೆ.
ಅನಾಮಧೇಯ ಪತ್ರದಲ್ಲಿ ಉಗ್ರರು ಕೊಹ್ಲಿ ಹಾಗೂ ಕೆಲವು ಪ್ರಮುಖ ರಾಜಕಾರಣಿಗಳಣ್ನು ಟಾರ್ಗೆಟ್ ಮಾಡಲಾಗುತ್ತದೆ ಎಂದು ಬರೆಯಲಾಗಿದೆ.
ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಹಿರಿಯ ಮುಖಂಡ ಎಲ್.ಕೆ. ಅಡ್ವಾಣಿ, ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಮತ್ತು ರಾಷ್ಟ್ರೀಯ ಸ್ವಯಂ ಸೇವನಕ ಸಂಘದ(ಆರ್ ಎಸ್ ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೆಸರುಗಳು ಈ ಪಟ್ಟಿಯಲ್ಲಿದೆ.
ಕೇರಳದ ಕೋಯಿಕ್ಕೋಡ್ ನಲ್ಲಿರುವ ಅಖಿಲ ಭಾರತ ಲಷ್ಕರ್ ಉಗ್ರ ಸಂಘಟನೆ ಈ ಕೃತ್ಯಕ್ಕೆ ಸಂಚು ರೂಪಿಸಿದೆ ಎಂದು ಎನ್ ಐಎ ಹೇಳಿದೆ.