ನವದೆಹಲಿ: ದೆಹಲಿಯ ಫಿರೋಜ್ ಷಾ ಕೋಟ್ಲಾದ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಟಿ-ಟ್ವೆಂಟಿ ಸರಣಿಯ ಮೊದಲ ಪಂದ್ಯದಲ್ಲಿ ಪೈಪೋಟಿ ನಡೆಸಲು ಸಜ್ಜಾಗಿವೆ. ಇಂದು ಸಂಜೆ ೭ಗಂಟೆ ಪಂದ್ಯ ಆರಂಭಗೊಳ್ಳಲಿದ್ದು, ಕ್ರಿಕೆಟ್ ಅಭಿಮಾನಗಳು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ.
ಬಾಂಗ್ಲಾದ ವಿರುದ್ಧ ಇದುವರೆಗೆ ಆಡಿರುವ ೮ ಪಂದ್ಯಗಳನ್ನೂ ಗೆದ್ದಿರುವ ಭಾರತ ಅಜೇಯ ಯಾತ್ರೆಯನ್ನು ಮುಂದುವರೆಸುವ ಹುಮ್ಮಸ್ಸಿನಲ್ಲಿದೆ.
ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವದ ಹೊಣೆಯನ್ನು ರೋಹಿತ್ ಶರ್ಮಾ ನಿಭಾಯಿಸಲಿದ್ದಾರೆ.