ಬೆಂಗಳೂರು: ಕರ್ನಾಟಕ ಪ್ರಿಮಿಯರ್ ಲೀಗ್(ಕೆಪಿಎಲ್) ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಮಂಗಳವಾರ ಬೆಳಗಾವಿ ಪ್ಯಾಂಥರ್ಸ್ ನ ಕೋಚ್ ಸುಧೀರ್ ಶಿಂಧೆ ಅವರನ್ನು ಬಂಧಿಸಿದ್ದಾರೆ.
ಕೆಪಿಎಲ್ ಫಿಕ್ಸಿಂಗ್ ಹಗರಣದಲ್ಲಿ ಬಂಧಿಸಲ್ಪಟ್ಟಿರುವಂತಹ ಆರೋಪಿಗಳು ಶಿಂಧೆ ಹೆಸರನ್ನು ಹೇಳಿದ್ದರು. ಇದನ್ನು ಆಧರಿಸಿಕೊಂಡು ಶಿಂಧೆ ಅವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ.
ಸಿಸಿಬಿ ಪೊಲೀಸರು ಇಂದು ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ ಮತ್ತು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡಲು ಕೋರಲಾಗುವುದು ಎಂದು ಸಿಸಿಬಿ ಅಧಿಕಾರಿ ತಿಳಿಸಿದರು.