ನವದೆಹಲಿ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ಟೆಸ್ಟ್ ರ‍್ಯಾಂಕಿಂಗ್ ನಲ್ಲಿ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಅವರನ್ನು ಹಿಂದಿಕ್ಕಿ ಅಗ್ರ ಸ್ಥಾನಕ್ಕೇರಿದರು.
928 ಅಂಕಗಳನ್ನು ಪಡೆದಿರುವ ಕೊಹ್ಲಿ ಈಗ ಟೆಸ್ಟ್ ರ‍್ಯಾಂಕಿಂಗ್ ನಲ್ಲಿ ನಂಬರ್ ವನ್ ಬ್ಯಾಟ್ಸ್ ಮೆನ್ ಆಗಿದ್ದಾರೆ. ಆಸ್ಟ್ರೇಲಿಯಾ ಸ್ಟೀವ್ ಸ್ಮಿತ್ ಅವರು 923 ಅಂಕದೊಂದಿಗೆ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.
ಬಾಂಗ್ಲಾದೇಶ ವಿರುದ್ಧ ಕೊಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆದ ಪಂದ್ಯದಲ್ಲಿ ಕೊಹ್ಲಿ ಶತಕ ಬಾರಿಸಿ ಸ್ಮಿತ್ ಅವರನ್ನು ಹಿಂದಿಕ್ಕಿದರು. ಇಂಗ್ಲೆಂಡ್ ವಿರುದ್ಧದ ಆ್ಯಷಸ್ ಟೆಸ್ಟ್ ಸರಣಿಯಲ್ಲಿ ನಾಲ್ಕು ಟೆಸ್ಟ್ ಗಳಲ್ಲಿ 774 ರನ್ ಬಾರಿಸಿದ್ದ ಸ್ಮಿತ್ ಅವರು ರ‍್ಯಾಂಕಿಂಗ್ ನಲ್ಲಿ ಅಗ್ರ ಸ್ಥಾನ ಪಡೆದಿದ್ದರು.