ಮುಂಬೈ: ಟೀ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ದಂಪತಿ ಮಗುವಿನ ನಿರೀಕ್ಷೆಯಲ್ಲಿರುವ ಸಂತಸದ ಖುಷಿಯನ್ನು ಟ್ವೀಟ್ ಮಾಡಿ ತಿಳಿಸಿದ್ದಾರೆ.
ನಾವಿನ್ನು ಮೂವರು, ಜನವರಿ 2021ಕ್ಕೆ ಹೊಸ ಸದಸ್ಯ ಬರಲಿದ್ದಾರೆ ಎಂಬ ಶೀರ್ಷಿಕೆ ನೀಡಿ ಅನುಷ್ಕಾ ವಿರಾಟ್ ಕೊಹ್ಲಿಯೊಂದಿಗಿನ ಫೋಟೋ ಟ್ವೀಟ್ ಮಾಡಿದ್ದಾರೆ. ಇದೇ ಟ್ವೀಟ್ ನ್ನು ವಿರಾಟ್ ಕೊಹ್ಲಿ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ.