News Kannada
Saturday, October 08 2022

ಕ್ರೀಡೆ

ಡಿ.13ರಂದು ಕುಟ್ಟಂದಿಯಲ್ಲಿ ಶೂಟಿಂಗ್ ಸ್ಪರ್ಧೆ - 1 min read

Photo Credit :

ಡಿ.13ರಂದು ಕುಟ್ಟಂದಿಯಲ್ಲಿ ಶೂಟಿಂಗ್ ಸ್ಪರ್ಧೆ

ಪೊನ್ನಂಪೇಟೆ: ಬಿಟ್ಟಂಗಾಲ ಸಮೀಪದ ಕಂಡಂಗಾಲದ ಪ್ರಗತಿ ಸ್ವಸಹಾಯ ಸಂಘದ ವತಿಯಿಂದ ಹುತ್ತರಿ ಹಬ್ಬದ ಪ್ರಯುಕ್ತ ತೆಂಗಿನಕಾಯಿಗೆ ಗುಂಡು ಹೊಡೆಯುವ ಪ್ರಥಮ ವರ್ಷದ ಮುಕ್ತ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಸಂಘದ ಪ್ರಮುಖರಾದ ಅಪ್ಪಂಡೇರಂಡ ದಿನು ಅವರು ತಿಳಿಸಿದ್ದಾರೆ.

ಈ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ತಿಂಗಳು (ಡಿಸೆಂಬರ್)13ರಂದು ಭಾನುವಾರ ಆಯೋಜಿಸಲಾಗಿರುವ ಈ ಸ್ಪರ್ಧೆಯು ಬಿ.ಶೆಟ್ಟಿಗೇರಿ ರಸ್ತೆಯಲ್ಲಿರುವ ಕುಟ್ಟಂದಿ ಪ್ರೌಢಶಾಲಾ ಮೈದಾನದಲ್ಲಿ ನಡೆಯಲಿದೆ. ಈ ಶೂಟಿಂಗ್ ಸ್ಪರ್ಧೆಯು 0.22 ರೈಫಲ್ ಮತ್ತು 12ನೇ ಬೋರ್ ಕೋವಿ ವಿಭಾಗಗಳಲ್ಲಿ ಪ್ರತ್ಯೇಕವಾಗಿ ನಡೆಯಲಿದ್ದು, ಈ ಎರಡು ವಿಧದ ಬಂದೂಕಿನಿಂದ ಮಾತ್ರ ಸ್ಪರ್ಧೆಯಲ್ಲಿ ತೆಂಗಿನಕಾಯಿಗೆ ಗುಂಡು ಹೊಡೆಯುವ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

ಅಂದು ಬೆಳಗ್ಗೆ 9ಗಂಟೆಗೆ ಸ್ಪರ್ಧೆ ಆರಂಭಗೊಳ್ಳಲಿದೆ. ಬೆಳಗ್ಗೆಯಿಂದಲೇ ಸ್ಪರ್ಧೆಯ ನೋಂದಣಿ ಕೂಡ ಪ್ರಾರಂಭವಾಗಲಿದೆ. ಸ್ಪರ್ಧೆಯಲ್ಲಿ ವಿಜೇತರಾಗುವ ಎರಡೂ ವಿಭಾಗದ ಸ್ಪರ್ಧಿಗಳಿಗೆ ತಲಾ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನದ ಆಕರ್ಷಕ ನಗದು ಬಹುಮಾನ ಮತ್ತು ಪಾರಿತೋಷಕ ನೀಡಿ ಗೌರವಿಸಲಾಗುವುದು. ಅಲ್ಲದೆ ಅಂದು ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಸ್ಪರ್ಧಿಗಳಿಗೆ ಮತ್ತು ಪ್ರೇಕ್ಷಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು.

ಆಸಕ್ತರು ಯಾವುದೇ ಲಿಂಗಭೇದವಿಲ್ಲದೆ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಆದರೆ ಸ್ಪರ್ಧಿಗಳಿಗೆ ವಯೋಮಿತಿಯ  ನಿರ್ಬಂಧವಿದ್ದು, 12 ವರ್ಷ ಪ್ರಾಯದ ಮೇಲ್ಪಟ್ಟವರು ಮಾತ್ರ ಈ ಸ್ಪರ್ಧೆಯಲ್ಲಿ ಮುಕ್ತವಾಗಿ ಪಾಲ್ಗೊಳ್ಳಬಹುದಾಗಿದೆ.

ಸ್ಪರ್ಧೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆಗಳಾದ 9148978919,

9740632495, 9731289423 ಅನ್ನು ಸಂಪರ್ಕಿಸಬಹುದಾಗಿದೆ ಎಂದು ದಿನು ಅವರು ತಿಳಿಸಿದ್ದಾರೆ.

See also  ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್ ಗೆ ಸೂಪರ್ ಗೆಲುವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು