ದುಬೈ: ಐಸಿಸಿ ಟೆಸ್ಟ್ ಕ್ರಿಕೆಟ್ ರ್ಯಾಂಕಿಂಗ್ನಲ್ಲಿ ಆಸ್ಟ್ರೇಲಿಯಾದ ಸ್ಮೀವ್ ಸ್ಮಿತ್ ಅವರು ಮೊದಲ ಸ್ಥಾನದಲ್ಲಿದ್ದು, ನ್ಯೂಜಿಲೆಂಡ್ ನ ನಾಯಕ ಕೇನ್ ವಿಲಿಯಮ್ಸನ್ ಮತ್ತು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಜಂಟಿ ಎರಡನೇ ಸ್ಥಾನದಲ್ಲಿರುವರು.
ಟೀಂ ಇಂಡಿಯಾದ ಚೇತೇಶ್ವರ ಪೂಜಾರ ಏಳನೇ ಸ್ಥಾನದಲ್ಲಿದ್ದು, ಇಂಗ್ಲೆಂಡಿನ ಬೆನ್ ಸ್ಟೋಕ್ಸ್ ಆಲ್ ರೌಂಡರ್ ಗಳಲ್ಲಿ ಅಗ್ರ ಸ್ಥಾನದಲ್ಲಿರುವರು.
ಬೌಲಿಂಗ್ ವಿಭಾಗದಲ್ಲಿ ಟೀಂ ಇಂಡಿಯಾ ಜಸ್ಪ್ರೀತ್ ಬುಮ್ರಾ 9ನೇ ಸ್ಥಾನ ಅಲಂಕರಿಸಿರುವರು. ಅಶ್ವಿನ್ 11 ಮತ್ತು ಮೊಹಮ್ಮದ್ ಶಮಿ 13ನೇ ಸ್ಥಾನದಲ್ಲಿರುವರು.