ಕೋಲ್ಕತ್ತಾ: ಟೀಂ ಇಂಡಿಯಾ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು , ಅವರನ್ನು ಕೋಲ್ಕತ್ತಾದ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆಗೆ ದಾಖಲಿಸಿರುವ 48 ವರ್ಷದ ಸೌರವ್ ಗಂಗೂಲಿಯವರಿಗೆ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆ ಇಡುವ ಸಾಧ್ಯತೆಯಿದೆ. ಪ್ರಸ್ತುತ ಅವರು ಅಪಾಯದ ಮಟ್ಟದಂದ ಪಾರಾಗಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ.
ಕಳೆದ ಬುಧವಾರವಷ್ಟೇ ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನಕ್ಕೆ ಭೇಟಿ ನೀಡಿದ್ದ ಗಂಗೂಲಿ, ಮುಂಬರುವ ಸಯ್ಯದ್ ಮುಶ್ತಾಕ್ ಅಲಿ ಟೂರ್ನಿಯ ಸಿದ್ದತೆ ಪರಿಶೀಲನೆಗಾಗಿ ಬೆಂಗಾಲ್ ಕ್ರಿಕೆಟ್ ಅಸೋಸಿಯೇನ್ ಅಧ್ಯಕ್ಷ ಅವಿಶೇಕ್ ಡಾಲ್ಮಿಯಾ ಜೊತೆ ಈಡನ್ ಗಾರ್ಡನ್ ಮೈದಾನಕ್ಕೆ ಭೇಟಿ ನೀಡಿದ್ದರು ಎಂದು ವರದಿಗಳು ತಿಳಿಸಿವೆ.