NewsKarnataka
Wednesday, January 26 2022

ಕ್ರೀಡೆ

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್: ಭಾರತಕ್ಕೆ ಆರಂಭಿಕ ಮುನ್ನಡೆ

ಲಾರ್ಡ್ಸ್: ಆತಿಥೇಯ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ ನಲ್ಲಿ 364 ರನ್ ಗಳಿಗೆ ಆಲೌಟ್ ಆಗಿದೆ.

ಕನ್ನಡಿಗ ಕೆ.ಎಲ್. ರಾಹುಲ್ 129 ರನ್‌ ಗಳಿಸಿದ್ದಾರೆ. ಟೀಂ ಇಂಡಿಯಾ ಪರ ರೋಹಿತ್ ಶರ್ಮಾ 83, ವಿರಾಟ್ ಕೊಹ್ಲಿ 42, ರಿಷಬ್ ಪಂತ್ 37, ರವೀಂದ್ರ ಜಡೇಜಾ 40 ರನ್ ಗಳಿಸಿದ್ದಾರೆ.

ಲಾರ್ಡ್ಸ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಎರಡನೇ ದಿನದಾಟಕ್ಕೆ 3 ವಿಕೆಟ್ ನಷ್ಟಕ್ಕೆ 119 ರನ್ ಗಳಿಸಿದೆ. ಇನ್ನು ಇಂಗ್ಲೆಂಡ್ 245 ರನ್ ಗಳ ಹಿನ್ನಡೆ ಅನುಭವಿಸಿದೆ.

ಇಂಗ್ಲೆಂಡ್ ಪರ ರೋರ್ರಿ ಬರ್ನ್ಸ್ 49, ಡೋಮ್ ಸಿಬ್ಲೇ 11 ಜೋ ರೂಟ್ ಅಜೇಯ 48 ಮತ್ತು ಜಾನಿ ಬೈರ್ಸ್ಟೋವ್ ಅಜೇಯ 6 ರನ್ ಗಳಿಸಿದ್ದು ಮೂರನೇ ದಿನದಾಟವನ್ನು ಆರಂಭಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149
Subscribe to our Brand New YouTube Channel

Subscribe Newsletter

Get latest news karnataka updates on your email.