NewsKarnataka
Monday, November 22 2021

ಕ್ರೀಡೆ

ಎರಡನೇ ಟೆಸ್ಟ್‌: ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ ರೋಚಕ ಜಯ

ಲಾರ್ಡ್ಸ್‌: ಇಲ್ಲಿನ ಮೈದಾನದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ, ಇಂಗ್ಲೆಂಡ್ ತಂಡವನ್ನು ಬರೋಬ್ಬರಿ 151 ರನ್​ಗಳಿಂದ ಸೋಲಿಸಿತು.

ಈ ಗೆಲುವಿನೊಂದಿಗೆ ಭಾರತ ತಂಡ ಐದು ಟೆಸ್ಟ್‌ಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಮೊದಲ ಟೆಸ್ಟ್ ಡ್ರಾ ಆಗಿತ್ತು.

ಕೊನೆಯ ದಿನವಾದ ಸೋಮವಾರ ಭಾರತ ಗೆಲ್ಲಲು 272 ರನ್ ಗಳ ಗುರಿ ನೀಡಿತ್ತು. ಇದಕ್ಕೆ ಉತ್ತರವಾಗಿ ಇಂಗ್ಲೆಂಡ್ ತಂಡವನ್ನು 120 ರನ್ ಗಳಿಗೆ ಆಲ್​ಔಟ್ ಮಾಡಲಾಯಿತು.

ಬುಮ್ರಾ ಮತ್ತು ಶಮಿ ಮೊದಲ ಎರಡು ಓವರ್‌ಗಳಲ್ಲಿ ಇಂಗ್ಲೆಂಡ್​ ತಂಡದ ಆರಂಭಿಕರಿಬ್ಬರನ್ನೂ ಪೆವಿಲಿಯನ್​ಗೆ ಕಳುಹಿಸುವ ಮೂಲಕ ಭಾರತಕ್ಕೆ ಉತ್ತಮ ಆರಂಭ ನೀಡಿದರು.

ಇನ್ನು ಭಾರತದ ಪರ ಅತ್ಯುತ್ತಮ ಪ್ರದರ್ಶನ ನೀಡಿದ ಮಹಮದ್ ಸಿರಾಜ್ 4 ವಿಕೆಟ್ ಪಡೆದರೆ ಬುಮ್ರಾ 3, ಇಶಾಂತ್ ಶರ್ಮಾ 2 ಮತ್ತು ಶಮಿ 1 ವಿಕೆಟ್ ಪಡೆದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!