News Kannada
Friday, December 09 2022

ಕ್ರೀಡೆ

ಪ್ಯಾರಾಲಿಂಪಿಕ್ಸ್‌: ಏರ್‌ ರೈಫಲ್‌ನಲ್ಲಿ ಅವನಿ ಲೇಖರಾಗೆ ಚಿನ್ನದ ಪದಕ

Photo Credit :

ಟೋಕಿಯೊ: ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಮತ್ತೊಂದು ಪದಕ ಭಾರತದ ‍ಪಾಲಾಗಿದೆ. ಮಹಿಳೆಯರ 10 ಮೀಟರ್ ಏರ್‌ ರೈಫಲ್‌ ಸ್ಟ್ಯಾಂಡಿಂಗ್ ಎಸ್‌ಎಚ್‌1 ವಿಭಾಗದಲ್ಲಿ ಭಾರತದ ಅವನಿ ಲೇಖರಾ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಪರ ಚಿನ್ನ ಗೆದ್ದ ಮೊದಲ ಮಹಿಳೆ ಎಂಬ ಖ್ಯಾತಿಗೆ ಅವನಿ ಲೇಖರಾ ಪಾತ್ರರಾಗಿದ್ದಾರೆ.

ಈ ಮೂಲಕ ಈ ಬಾರಿಯ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ದೊರೆತಿದೆ. ಅಲ್ಲದೆ, ಪ್ಯಾರಾಲಿಂಪಿಕ್ಸ್‌ನಲ್ಲಿ ಈವರೆಗೆ ಭಾರತಕ್ಕೆ ಚಿನ್ನ ತಂದುಕೊಟ್ಟವರಲ್ಲಿ ನಾಲ್ಕನೇಯವರಾಗಿದ್ದಾರೆ.

ಈ ಹಿಂದೆ ಈಜುಗಾರ ಮುರಲೀಕಾಂತ್ ಪೇಟ್ಕರ್ (1972), ಜಾವೆಲಿನ್ ಥ್ರೋವರ್ ದೇವೇಂದ್ರ ಝಝಾರಿಯಾ (2004 ಮತ್ತು 2016) ಹಾಗೂ ಹೈಜಂಪರ್ ತಂಗವೇಲು ಮರಿಯಪ್ಪನ್ (2016) ಭಾರತದ ಪರ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದ್ದಾರೆ.

ಅವನಿ ಲೇಖರಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ.

See also  ಪ್ಯಾರಾಂಪಿಕ್ಸ್‌– ಸುಹಾಸ್‌ ಯತಿರಾಜ್‌ಗೆ ಬೆಳ್ಳಿಪದಕ: ಪ್ರಧಾನಿ ಅಭಿನಂದನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು