NewsKarnataka
Saturday, November 27 2021

ಕ್ರೀಡೆ

ಪ್ಯಾರಾಲಿಂಪಿಕ್ಸ್: ಭಾರತಕ್ಕೆ ಮತ್ತೊಂದು ಚಿನ್ನ, ಜಾವಲಿನ್ ಥ್ರೋನಲ್ಲಿ ಸುಮಿತ್ ಮಿಂಚು

ಟೋಕಿಯೊ: ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತ ಪದಕ ಬೇಟೆ ಮುಂದುವರೆದಿದೆ. ಭಾರತದ ಸುಮಿತ್ ಅಂತಿಲ್ ಜಾವಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

ಫೈನಲ್ ನಲ್ಲಿ ಜಾವಲಿನ್ ಥ್ರೋನಲ್ಲಿ ಭಾರತದಿಂದ ಸುಮಿತ್ ಅಂತಿಲ್ ಮತ್ತು ಸಂದೀಪ್ ಭಾಗವಹಿಸಿದ್ದರು. ಸುಮಿತ್ ಅಂತಿಲ್ 68.55 ಮೀಟರ್ ದೂರಕ್ಕೆ ಥ್ರೋ ಎಸೆಯುವ ಮೂಲಕ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ.

ಇನ್ನು ಸಂದೀಪ್ 62.20 ಮೀಟರ್ ದೂರಕ್ಕೆ ಥ್ರೋ ಎಸೆಯುವ ಮೂಲಕ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.

ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತ ಈತನಕ 7 ಪದಕಗಳನ್ನು ಬಾಚಿದೆ. 2 ಚಿನ್ನ, 4 ಬೆಳ್ಳಿ ಮತ್ತು 1 ಕಂಚಿನ ಪದಕ ಸೇರಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!