News Kannada
Friday, December 09 2022

ಕ್ರೀಡೆ

ಶೂಟರ್ ಅವನಿಗೆ ಮತ್ತೊಂದು ಪದಕ: ಹೊಸ ದಾಖಲೆ ನಿರ್ಮಾಣ

Photo Credit :

ಟೊಕಿಯೊ: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಶೂಟರ್ ಅವನಿ ಲೇಖರಾ ಅವರು ಇತಿಹಾಸ ನಿರ್ಮಿಸಿದ್ದಾರೆ. ಈ ಹಿಂದೆ ಚಿನ್ನ ಗೆದ್ದಿದ್ದ ಅವನಿ ಇದೀಗ ಮತ್ತೆ ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಒಂದೇ ಟೂರ್ನಿಯಲ್ಲಿ ಎರಡು ಪದಕ ಗೆದ್ದು ದಾಖಲೆ ಬರೆದಿದ್ದಾರೆ.

ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಲಭಿಸಿದ್ದು, ಶೂಟಿಂಗ್ ವಿಭಾಗದಲ್ಲಿ ಭಾರತದ ಅವನಿ ಲೇಖರಾ ಕಂಚಿನ ಪದಕ ಜಯಿಸಿದ್ದಾರೆ. ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಶುಕ್ರವಾರ ನಡೆದ ಆರ್ 8 ಈವೆಂಟ್ ನ ಮಹಿಳೆಯರ 50 ಮೀ ರೈಫಲ್ 3 ಪಿ ಎಸ್‌ಎಚ್ 1 ಸ್ಪರ್ಧೆಯಲ್ಲಿ 3ನೇ ಸ್ಥಾನ ಪಡೆದ ಅವನಿ ಲೇಖರಾ ಕಂಚಿನ ಪದಕ ಗೆದ್ದಿದ್ದಾರೆ.

ಈ ಫೈನಲ್ ಪಂದ್ಯದಲ್ಲಿ ಭಾರತದ ಅವನಿ ಲೇಖರಾ ಒಟ್ಟು 445.9ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೇರಿ ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾರೆ. ಅಂತಿಮ ಸುತ್ತು ಆರಂಭಕ್ಕೂ ಮುನ್ನ ಅವನಿ ಕೇವಲ 149.5 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರು. ಆದರೆ, ಅಂತಿಮ ಸುತ್ತಿನಲ್ಲಿ ಭರ್ಜರಿ ಪ್ರದರ್ಶನ ನೀಡಿ ಮೂರನೇ ಸ್ಥಾನ ಪಡೆದರು.

See also  ಇಂದಿನಿಂದ ಟೋಕಿಯೊ ಪ್ಯಾರಾಲಿಂಪಿಕ್ಸ್‌: ಶುಭ ಕೋರಿದ ಕೊಹ್ಲಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು