News Kannada
Monday, March 20 2023

ಕ್ರೀಡೆ

ಪ್ಯಾರಾಲಿಂಪಿಕ್ಸ್: ಫೈನ‌ಲ್‌ ತಲುಪಿದ ನೋಯ್ಡಾ ಡಿಸಿ ಸುಹಾಸ್ ಯತಿರಾಜ್

Photo Credit :

ಟೋಕಿಯೊ: ನೋಯ್ಡಾದ ಜಿಲ್ಲಾಧಿಕಾರಿಯಾಗಿರುವ ಸುಹಾಸ್ ಯತಿರಾಜ್ ಪ್ಯಾರಾಲಿಂಪಿಕ್ಸ್ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್‌ಎಲ್4 ವಿಭಾಗದಲ್ಲಿ ಫೈನಲ್‌ಗೆ ಪ್ರವೇಶಿಸಿದ್ದಾರೆ.

ಪುರುಷರ ಬ್ಯಾಡ್ಮಿಂಟನ್ ಎಸ್‌ಎಲ್4 ವಿಭಾಗದಲ್ಲಿ ಶನಿವಾರ ನಡೆದ ಸೆಮಿಫೈನಲ್ ಮುಖಾಮುಖಿಯಲ್ಲಿ ಯತಿರಾಜ್, ಎದುರಾಳಿ ಇಂಡೋನೇಷ್ಯಾದ ಫ್ರೆಡಿ ಸೆಟಿಯಾವನ್ ವಿರುದ್ಧ 21-9, 21-15ರ ಅಂತರದಲ್ಲಿ ಗೆಲುವು ದಾಖಲಿಸಿದರು.

ಸುಹಾಸ್ ಯತಿರಾಜ್‌ ಅವರು ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಮೊದಲ ಐಎಎಸ್ ಅಧಿಕಾರಿ ಎನಿಸಿದ್ದಾರೆ.

ಈ ಮೊದಲು ಬ್ಯಾಡ್ಮಿಂಟನ್ ಪುರುಷರ ಎಸ್‌ಎಲ್3 ವಿಭಾಗದಲ್ಲಿ ಭಾರತದ ಪ್ರಮೋದ್ ಭಗತ್ ಫೈನಲ್‌ಗೆ ಪ್ರವೇಶಿಸಿದ್ದಾರೆ.

See also  ಪ್ಯಾರಾಲಂಪಿಕ್ಸ್: ಎತ್ತರ ಜಿಗಿತದಲ್ಲಿ ಭಾರತದ ನಿಶಾದ್‌ಗೆ ಬೆಳ್ಳಿ ಪದಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು