News Kannada
Thursday, December 08 2022

ಕ್ರೀಡೆ

ಚೆನ್ನೈ ಸೂಪರ್ ಕಿಂಗ್ಸ್‌ಗೆ ಮಣಿದ ಬೆಂಗಳೂರು

Photo Credit :

ಶಾರ್ಜಾ: ಉತ್ತಮ ಆರಂಭ ಕಂಡರೂ ನಂತರ ಕುಸಿತಕ್ಕೆ ಒಳಗಾಗಿ ಸಾಧಾರಣ ಮೊತ್ತ ಕಲೆ ಹಾಕಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಎರಡನೇ ಸೋಲು ಕಂಡಿತು. ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಆರು ವಿಕೆಟ್‌ಗಳಿಂದ ವಿರಾಟ್ ಕೊಹ್ಲಿ ಬಳಗವನ್ನು ಮಣಿಸಿತು.

157 ರನ್‌ಗಳ ಗೆಲುವಿನ ಗುರಿ ಬೆನ್ನತ್ತಿದ ಚೆನ್ನೈ ಇನ್ನೂ 11 ಎಸೆತ ಬಾಕಿ ಇರುವಾಗ ದಡ ಸೇರಿತು. ಋತುರಾಜ್ ಗಾಯಕವಾಡ್ ಮತ್ತು ಫಫ್ ಡು ಪ್ಲೆಸಿ ಮೊದಲ ವಿಕೆಟ್‌ಗೆ 71 ರನ್‌ ಸೇರಿಸಿ ಉತ್ತಮ ಆರಂಭ ಒದಗಿಸಿದರು.

ಮೋಯಿನ್ ಅಲಿ ಮತ್ತು ಅಂಬಟಿ ರಾಯುಡು ತಾಳ್ಮೆಯ ಬ್ಯಾಟಿಂಗ್ ಮಾಡಿದರು. ಅಜೇಯರಾಗಿ ಉಳಿದ ಸುರೇಶ್ ರೈನಾ ಮತ್ತು ಮಹೇಂದ್ರ ಸಿಂಗ್ ಧೋನಿ ಸುಲಭ ಜಯಕ್ಕೆ ಕಾರಣರಾದರು. ಈ ಜಯದೊಂದಿಗೆ ತಂಡ ಪಾಯಿಂಟ್ ಪಟ್ಟಿಯಲ್ಲಿ ಮತ್ತೆ ಅಗ್ರ ಸ್ಥಾನಕ್ಕೇರಿತು.

See also  ಎರಡನೇ ಇನ್ನಿಂಗ್ಸ್ ಗೆದ್ದು ಸರಣಿ ಸಮಬಲಗೊಳಿಸಿದ ಟೀಂ ಇಂಡಿಯಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು