News Kannada
Monday, October 03 2022

ಕ್ರೀಡೆ

33ನೇ ವಸಂತಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ - 1 min read

Photo Credit :

ನವದೆಹಲಿ : ಟೀಮ್ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಅವರು ಇಂದು 33ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಆ ಹಿನ್ನೆಲೆಯಲ್ಲಿ ಟ್ವಿಟರ್‌ನಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ಕೊಹ್ಲಿ ಹುಟ್ಟುಹಬ್ಬದ ಅಂಗವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ಐಸಿಸಿ), ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ), ಐಪಿಎಲ್‌ ಫ್ರಾಂಚೈಸಿ ಆರ್‌ಸಿಬಿ ಸೇರಿಂತೆ ಅನೇಕ ಅಭಿಮಾನಿಗಳು ಟ್ವಿಟರ್‌ನಲ್ಲಿ ಶುಭ ಕೋರಿದ್ದಾರೆ. ನಗುಮುಖದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರು ಹುಟ್ಟುಹಬ್ಬ ಉಡುಗೊರೆಯಾಗಿ ಇಂದು ರಾತ್ರಿ ಸ್ಕಾಟ್ಲೆಂಡ್‌ ವಿರುದ್ಧ ಗೆಲುವು ಪಡೆಯುತ್ತಾರೆಯೇ?’ ಎಂದು ಐಸಿಸಿ ಟ್ವೀಟ್ ಮಾಡಿದೆ.

ವಿಶ್ವದ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ವಿರಾಟ್‌ ಕೊಹ್ಲಿ ಅವರಿಗೆ ಜನ್ಮದಿನದ ಶುಭಾಶಯಗಳು’ ಎಂದು ಬಿಸಿಸಿಐ ಟ್ವೀಟ್‌ ಮಾಡಿದೆ.

ಕೊಹ್ಲಿ ಅವರಿಗೆ ಜನ್ಮದಿನದ ಶುಭಾಶಯಗಳು. ಆರ್‌ಸಿಬಿ ತಂಡಕ್ಕೆ ನಿಮ್ಮ ಕೊಡುಗೆ ಮಹತ್ವದ್ದಾಗಿದೆ. ಸಹ ಆಟಗಾರರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡಿದ್ದೀರಿ. ಜತೆಗೆ ವಿಶ್ವದಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ಗಳಿಸಿರುವ ನಿಮಗೆ ಧನ್ಯವಾದಗಳು’ ಎಂದು ಆರ್‌ಸಿಬಿ ಟ್ವೀಟ್ ಮಾಡಿದೆ.

ಟೆಸ್ಟ್‌, ಏಕದಿನ ಹಾಗೂ ಟಿ-20 ಮಾದರಿಗಳಲ್ಲಿ ಭಾರತ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ ನಾಯಕರಲ್ಲಿ ವಿರಾಟ್‌ ಕೊಹ್ಲಿಯೂ ಒಬ್ಬರಾಗಿದ್ದಾರೆ. 2008ರ 19 ವರ್ಷದೊಳಗಿನವರ ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ಪ್ರಶಸ್ತಿ ಗೆಲುವಿಗೆ ವಿರಾಟ್‌ ಕೊಹ್ಲಿ ಪ್ರಮುಖ ಪಾತ್ರವಹಿಸಿದ್ದರು. ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡ ಹೆಚ್ಚು ಟೆಸ್ಟ್‌ ಪಂದ್ಯಗಳನ್ನು ಗೆದ್ದಿದೆ. ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 10,000 ರನ್‌ ಗಳಿಸಿದ ದಾಖಲೆ ಕೊಹ್ಲಿ ಹೆಸರಲ್ಲಿದೆ.

ಸದ್ಯ ನಡೆಯುತ್ತಿರುವ ಟಿ-20 ವಿಶ್ವಕಪ್‌ ಟೂರ್ನಿಯ ಬಳಿಕ ಕೊಹ್ಲಿ ‌ನಾಯಕತ್ವ ತ್ಯಜಿಸಲಿದ್ದಾರೆ. ಭಾರತ ಇಂದಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಸೆಣಸಲಿದೆ

See also  ಮೈಸೂರಿನಲ್ಲಿ ಅರ್ಜುನ್ ಜನ್ಯ ಹುಟ್ಟುಹಬ್ಬಾಚರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು