News Kannada
Tuesday, November 29 2022

ಕ್ರೀಡೆ

ಭಾರತ-ದಕ್ಷಿಣ ಆಫ್ರಿಕಾ ತಂಡದ ಟೆಸ್ಟ್ ಪಂದ್ಯಕ್ಕೆ ಪ್ರೇಕ್ಷಕರಿಗಿಲ್ಲ ಅವಕಾಶ - 1 min read

Photo Credit :

ಜೊಹಾನ್ಸ್‌ಬರ್ಗ್‌ : ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಇದೇ 26ರಿಂದ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಪ್ರೇಕ್ಷಕರಿಗೆ ಅವಕಾಶ ನೀಡದೇ ಇರಲು ಕ್ರಿಕೆಟ್ ದಕ್ಷಿಣ ಆಫ್ರಿಕಾ (ಸಿಎಸ್‌ಎ) ನಿರ್ಧರಿಸಿದೆ. ದೇಶದಲ್ಲಿ ಕೋವಿಡ್‌-19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಈ ತೀರ್ಮಾನಕ್ಕೆ ಬರಲಾಗಿದ್ದು ಟಿಕೆಟ್ ಮಾರಾಟವನ್ನು ತಡೆಯಲಾಗಿದೆ.

ದಕ್ಷಿಣ ಆಫ್ರಿಕಾದಲ್ಲಿ ಕೋವಿಡ್‌-19ರ ನಾಲ್ಕನೇ ಅಲೆ ಆತಂಕ ಸೃಷ್ಟಿಸಿದೆ. ಕಳೆದ ವಾರ ದಾಖಲೆ ಪ್ರಮಾಣದ ಪ್ರಕರಣಗಳು ಪತ್ತೆಯಾಗಿದ್ದವು. ಹೀಗಾಗಿ ವಿಶೇಷ ಆಹ್ವಾನಿತರಿಗೆ ಮಾತ್ರ ಪಂದ್ಯ ವೀಕ್ಷಣೆಗೆ ಅವಕಾಶ ನೀಡಲಾಗುವುದು ಎಂದು ಸಿಎಸ್‌ಎ ವಿವರಿಸಿದೆ.

ಪ್ರಮುಖ ದೇಶಿ ಟೂರ್ನಿಯಾದ ನಾಲ್ಕು ದಿನಗಳ ಫ್ರಾಂಚೈಸ್‌ ಸರಣಿಯ ಕೊನೆಯ ಹಂತದ ಪಂದ್ಯಗಳನ್ನು ಕೋವಿಡ್ ಕಾರಣದಿಂದ ರದ್ದುಗೊಳಿಸಲಾಗಿದೆ.

ಡಿಸೆಂಬರ್ 16ರಂದು ಭಾರತ ತಂಡ ದಕ್ಷಿಣ ಆಫ್ರಿಕಾ ತಲುಪಿದ್ದು ಆಟಗಾರರು ರೆಸಾರ್ಟ್ ಒಂದರಲ್ಲಿ ಬಯೊಬಬಲ್‌ನಲ್ಲಿ ಉಳಿದುಕೊಂಡಿದ್ದಾರೆ

See also  ಹಿರಿಯ ಪ್ರಥಮದರ್ಜೆ ಕ್ರಿಕೆಟಿಗ ವಸಂತ್ ರೈಜಿ ನಿಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು