NewsKarnataka
Wednesday, January 26 2022

ಕ್ರೀಡೆ

ಆಕ್ಷೇಪಾರ್ಹ ಹೇಳಿಕೆ: ಸಿದ್ದಾರ್ಥ್ ಕ್ಷಮೆಯಾಚನೆ ಕುರಿತು ಪ್ರತಿಕ್ರಿಯೆ ನೀಡಿದ ಸೈನಾ

ನವದೆಹಲಿ : ಆಕ್ಷೇಪಾರ್ಹ ಹೇಳಿಕೆ ಕುರಿತು ನಟ ಸಿದ್ಧಾರ್ಥ್ ಕ್ಷಮೆ ಕೋರಿದ್ದು ಸಂತಸ ತಂದಿದೆ ಎಂದು ರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಮತ್ತು ಬಿಜೆಪಿ ನಾಯಕಿಯಾಗಿರುವ ಸೈನಾ ನೆಹ್ವಾಲ್ ಅವರು ಬುಧವಾರ ಹೇಳಿದ್ದಾರೆ.

ಸಿದ್ದಾರ್ಥ್ ಕ್ಷಮೆಯಾಚನೆ ಕುರಿತು ಪ್ರತಿಕ್ರಿಯೆ ನೀಡಿರುವ ಸೈನಾ ನೆಹ್ವಾಲ್ ಅವರು, , ಮೊದಲು ನನ್ನ ಬಗ್ಗೆ ಹೇಳಿದ್ದರು. ಇದೀಗ ಕ್ಷಮೆಯಾಚಿಸಿದ್ದಾರೆ. ಈ ವಿಚಾರ ಯಾವ ಕಾರಣಕ್ಕೆ ಇಷ್ಟೊಂದು ವೈರಲ್ ಆಗಿದೆ ಎಂಬುದು ನನಗೆ ಗೊತ್ತಿಲ್ಲ. ಟ್ವಿಟರ್‌ನಲ್ಲಿ ಟ್ರೆಂಡ್ ಆಗುತ್ತಿರುವುದನ್ನು ನೋಡಿ ನನಗೆ ಆಶ್ಚರ್ಯವಾಯಿತು. ಸಿದ್ಧಾರ್ಥ್ ಕ್ಷಮೆ ಕೇಳಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.

ನೀವು ಮಹಿಳೆಯೊಬ್ಬರನ್ನು ಈ ರೀತಿ ಗುರಿಯಾಗಿಸಿಕೊಳ್ಳಬಾರದು. ಆದರೂ ಪರವಾಗಿಲ್ಲ. ನಾನು ಅದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ನಾನಿರುವ ಸ್ಥಾನದಲ್ಲಿ ನಾನು ಸಂತೋಷವಾಗಿದ್ದೇನೆ. ದೇವರು ಅವರಿಗೆ ಒಳ್ಳೆಯದು ಮಾಡಲಿ ಎಂದಿದ್ದಾರೆ.

ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿರುವ ಸಿದ್ಧಾರ್ಥ್ ಅವರು, ಪ್ರೀತಿಯ ಸೈನಾ ನೆಹ್ವಾಲ್, ನಿಮ್ಮ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ ನಾನು ಬರೆದ ಅಸಭ್ಯ ಹಾಸ್ಯಕ್ಕಾಗಿ ನಿಮ್ಮಲ್ಲಿ ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ಅನೇಕ ವಿಷಯಗಳಲ್ಲಿ ನಿಮ್ಮೊಂದಿಗೆ ಭಿನ್ನಾಭಿಪ್ರಾಯ ಹೊಂದಿರಬಹುದು. ನಿಮ್ಮ ಟ್ವೀಟ್‌ಅನ್ನು ನಾನು ಓದಿದಾಗ ನನಗಾದ ನಿರಾಶೆ ಅಥವಾ ಕೋಪವನ್ನು ನನ್ನ ಧ್ವನಿ ಮತ್ತು ಮಾತುಗಳಲ್ಲಿ ಸಮರ್ಥಿಸಲು ಸಾಧ್ಯವಿಲ್ಲ. ಜೋಕ್‌ಗೆ ಸಂಬಂಧಿಸಿದಂತೆ ಅದು ಉತ್ತಮ ಜೋಕ್ ಆಗಿರಲಿಲ್ಲ. ಕ್ಷಮಿಸಿ.

‘ನನ್ನ ಹಾಸ್ಯವು ಯಾವುದೇ ದುರುದ್ದೇಶಪೂರಿತ ಉದ್ದೇಶವನ್ನು ಹೊಂದಿರಲಿಲ್ಲ. ನಾನು ನಿಷ್ಠಾವಂತ ಸ್ತ್ರೀವಾದಿ ಮಿತ್ರ ಮತ್ತು ನನ್ನ ಟ್ವೀಟ್‌ನಲ್ಲಿ ಯಾವುದೇ ಲಿಂಗವನ್ನು ಸೂಚಿಸಿಲ್ಲ ಮತ್ತು ಮಹಿಳೆಯಾಗಿ ನಿಮ್ಮ ಮೇಲೆ ಆಕ್ರಮಣ ಮಾಡುವ ಉದ್ದೇಶವಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಇದನ್ನು ಇಲ್ಲಿಗೆ ಬಿಟ್ಟು ನೀವು ನನ್ನ ಪತ್ರವನ್ನು ಸ್ವೀಕರಿಸುತ್ತೀರಿ ಎಂದು ನಾನು ಭಾವಿಸುತ್ತೇನೆ. ನೀವು ಯಾವಾಗಲೂ ನನ್ನ ಚಾಂಪಿಯನ್ ಆಗಿರುತ್ತೀರಿ ಎಂದು ಹೇಳಿ ಕ್ಷಣೆಯಾಚಿಸಿದ್ದರು. ಅಲ್ಲದೆ, ವಿವಾದಾತ್ಮಕ ಟ್ವೀಟ್’ನ್ನೂ ಸಿದ್ಧಾರ್ಥ್ ಡಿಲೀಟ್ ಮಾಡಿದ್ದರು.

ಕೆಲವೇ ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿಗೆ ಪಂಜಾಬ್‌ನಲ್ಲಿ ಭದ್ರತಾ ಲೋಪ ಉಂಟಾಗಿತ್ತು. ಈ ವಿಚಾರ ಕುರಿತು ಸೈನಾ ನೆಹ್ವಾಲ್ ಟ್ವೀಟ್ ಮಾಡಿದ್ದರು.

”ತನ್ನ ದೇಶದ ಪ್ರಧಾನಿಯ ಭದ್ರತೆಯಲ್ಲಿ ಯಾವುದೇ ದೇಶ ರಾಜಿ ಮಾಡಿಕೊಳ್ಳುವುದಿಲ್ಲ. ಪ್ರಧಾನಿ ಮೋದಿ ಅವರಿಗೆ ಪಂಜಾಬ್‌ನಲ್ಲಿ ಉಂಟಾದ ಭದ್ರತಾ ಲೋಪವನ್ನು ನಾನು ಕಟು ಪದಗಳಿಂದ ಟೀಕಿಸುತ್ತೇನೆ” ಎಂದು ಸೈನಾ ನೆಹ್ವಾಲ್ ಟ್ವೀಟ್ ಮಾಡಿದ್ದರು. ಸೈನಾ ನೆಹ್ವಾಲ್ ಅವರ ಈ ಟ್ವೀಟ್‌ಗೆ ನಟ ಸಿದ್ದಾರ್ಥ್ ಪ್ರತಿಕ್ರಿಯೆ ಕೊಟ್ಟಿದ್ದರು.

”Subtle cock champion of the world.. ಭಾರತವು ರಕ್ಷಕರನ್ನು ಹೊಂದಿರುವುದಕ್ಕೆ ದೇವರಿಗೆ ಧನ್ಯವಾದಗಳು. ಶೇಮ್ ಆನ್ ಯೂ ರಿಹಾನ್ನಾ” ಎಂದು ಸೈನಾ ನೆಹ್ವಾಲ್ ಟ್ವೀಟ್‌ಗೆ ನಟ ಸಿದ್ದಾರ್ಥ್ ರಿಪ್ಲೈ ಮಾಡಿದ್ದರು. ಸಿದ್ದಾರ್ಥ್‌ ಅವರ ಈ ಟ್ವೀಟ್‌ಗೆ ಭಾರೀ ಪ್ರತಿರೋಧ ವ್ಯಕ್ತವಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.