❤️ @hazelkeech pic.twitter.com/IK6BnOgfBe
— Yuvraj Singh (@YUVSTRONG12) January 25, 2022
ನವದೆಹಲಿ: ಭಾರತದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ದಂಪತಿಗೆ ಗಂಡು ಮಗು ಜನಿಸಿದೆ. . ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಮಾಜಿ ಕ್ರಿಕೆಟಿಗ ಯುವರಾಜ್ ಮಾಹಿತಿ ಹಂಚಿಕೊಂಡಿದ್ದಾರೆ.
‘ನಮ್ಮ ಎಲ್ಲ ಅಭಿಮಾನಿಗಳು, ಕುಟುಂಬ ಮತ್ತು ಸ್ನೇಹಿತರಿಗೆ ತಿಳಿಸುವುದೇನೆಂದರೆ, ಇಂದು ದೇವರು ನಮಗೆ ಮಗುವನ್ನು ಆಶೀರ್ವದಿಸಿದ್ದಾನೆ ಎಂಬ ವಿಚಾರ ಹಂಚಿಕೊಳ್ಳಲು ನಾವು ಸಂತೋಷಪಡುತ್ತೇವೆ. ನಮಗೆ ಈ ಆಶೀರ್ವಾದವನ್ನು ನೀಡಿದ್ದಕ್ಕಾಗಿ ನಾವು ದೇವರಿಗೆ ಧನ್ಯವಾದ ಹೇಳುತ್ತೇವೆ. ನಾವು ಮಗುವನ್ನು ಜಗತ್ತಿಗೆ ಸ್ವಾಗತಿಸುವಂತೆ ನೀವು ನಮ್ಮ ಗೌಪ್ಯತೆಯನ್ನು ಗೌರವಿಸಬೇಕೆಂದು ನಾವು ಬಯಸುತ್ತೇವೆ’ ಎಂದು ಯುವರಾಜ್ ಸಿಂಗ್ ಟ್ವಿಟ್ಟರ್ ನಲ್ಲಿ ಹೇಳಿದ್ದಾರೆ.