News Kannada
Friday, March 31 2023

ಕ್ರೀಡೆ

ಆಸ್ಪತ್ರೆಗೆ ದಾಖಲಾದ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ

Photo Credit :

ಬೆಂಗಳೂರು: ಇಂಡಿಯನ್​ ಪ್ರೀಮಿಯರ್ ಲೀಗ್​​ ಮೆಗಾ ಹರಾಜು ಪ್ರಕ್ರಿಯೆಗೋಸ್ಕರ ಬೆಂಗಳೂರಿಗೆ ಆಗಮಿಸಿರುವ ಭಾರತೀಯ ಕ್ರಿಕೆಟ್ ಮಂಡಳಿ ಅಧ್ಯಕ್ಷ ಸೌರವ್​ ಗಂಗೂಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಳೆದ ಜನವರಿ ತಿಂಗಳಲ್ಲಿ ಎರಡನೇ ಸಲ ಲಘು ಹೃದಯಾಘಾತಕ್ಕೊಳಗಾಗಿ ಕೋಲ್ಕತ್ತಾದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದ ಬಿಸಿಸಿಐ ಅಧ್ಯಕ್ಷ ಗಂಗೂಲಿ, ಇದೀಗ ಬೆಂಗಳೂರಿಗೆ ತೆರಳಿದ್ದು, ಇದರ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಾರಾಯಣ ಹೆಲ್ತ್​ ಸಿಟಿಯ ಅಧ್ಯಕ್ಷರಾಗಿರುವ ಡಾ. ದೇವಿ ಶೆಟ್ಟಿ ನೇತೃತ್ವದ ತಂಡ ಅವರ ಆರೋಗ್ಯ ತಪಾಸಣೆ ನಡೆಸಲಿದೆ.

ಹೃದಯ ತಪಾಸಣೆಗೋಸ್ಕರ ಅವರು ನಗರದ ನಾರಾಯಣ ಹೃದಯಾಲಯದಲ್ಲಿ ದಾಖಲಾಗಿದ್ದಾರೆಂಬ ಮಾಹಿತಿ ತಿಳಿದು ಬಂದಿದೆ.

ಈಗಾಗಲೇ ಅಂಜಿಯೋಪ್ಲ್ಯಾಸ್ಟಿಗೊಳಗಾಗಿರುವ ಗಂಗೂಲಿ ಎರಡು ಸಲ ಲಘು ಹೃದಯಾಘಾತಕ್ಕೊಳಗಾಗಿದ್ದು, ಎರಡು ಸ್ಟೆಂಟ್​​ ಅಳವಡಿಕೆ ಮಾಡಲಾಗಿದೆ. ಕಳೆದ ಕೆಲ ವಾರಗಳ ಹಿಂದೆ ಕೋವಿಡ್ ಸೋಂಕಿಗೊಳಗಾಗಿದ್ದ ಗಂಗೂಲಿ ಮನೆಯಲ್ಲೇ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದರು.

 

 

See also  ವಸತಿ ಶಾಲೆಯಲ್ಲಿ ಆಹಾರ ಸೇವಿಸಿದ ವಿದ್ಯಾರ್ಥಿಗಳಿಗೆ ವಾಂತಿ, ಬೇಧಿ: ಆಸ್ಪತ್ರೆಗೆ ದಾಖಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು