News Kannada
Saturday, October 01 2022

ಕ್ರೀಡೆ

ಪಿಂಕ್ ಬಾಲ್ ಟೆಸ್ಟ್ ಪಂದ್ಯ: ಚಿನ್ನಸ್ವಾಮಿ ಮೈದಾನದಲ್ಲಿ ಶೇ.100 ಪ್ರೇಕ್ಷಕರಿಗೆ ಅವಕಾಶ - 1 min read

Photo Credit :

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾ.12ರಿಂದ ಆರಂಭವಾಗಲಿರುವ  ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಪೂರ್ಣಪ್ರಮಾಣದ ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಮಿತಿಯು ಗುರುವಾರ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದೆ.

ಸರಣಿಯ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಶನಿವಾರ ಆರಂಭವಾಗಲಿದೆ. ಇದು ಪಿಂಕ್ ಬಾಲ್ ಟೆಸ್ಟ್ ಪಂದ್ಯವಾಗಿದ್ದು, ಮಧ್ಯಾಹ್ನ ಆರಂಭವಾಗಲಿದೆ. ಚಿನ್ನಸ್ವಾಮಿ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಪಿಂಕ್ ಬಾಲ್ ಟೆಸ್ಟ್ ಪಂದ್ಯ ನಡೆಯುತ್ತಿದೆ.

ಹೆಚ್ಚಿನ ಸಂಖ್ಯೆಯ ಬೇಡಿಕೆಗಳನ್ನು ಪರಿಗಣಿಸಿ ಮತ್ತು ಪ್ರೇಕ್ಷಕರಿಗೆ ಹೆಚ್ಚಿನ ನಿರ್ಬಂಧಗಳಿಲ್ಲದ ಕಾರಣ, ಕೆಎಸ್‌ಸಿಎ ಕ್ರೀಡಾಂಗಣದ ಪೂರ್ಣ ಸಾಮರ್ಥ್ಯಕ್ಕಾಗಿ ಟಿಕೆಟ್‌ ಗಳ ಮಾರಾಟವನ್ನು ತೆರೆಯುತ್ತದೆ ಎಂದು ಕೆಎಸ್‌ಸಿಎ ಖಜಾಂಚಿ ವಿನಯ್ ಮೃತ್ಯುಂಜಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೊದಲ ಟೆಸ್ಟ್ ಪಂದ್ಯವು ಮೊಹಾಲಿಯಲ್ಲಿ ನಡೆದಿತ್ತು. ಈ ಪಂದ್ಯವನ್ನು ಭಾರತ ತಂಡ ಇನ್ನಿಂಗ್ ಮತ್ತು 222 ರನ್ ಗಳ ಬೃಹತ್ ಅಂತರದಿಂದ ಗೆದ್ದುಕೊಂಡಿತ್ತು.

See also  ಭಾರತ VS ವೆಸ್ಟ್ ಇಂಡೀಸ್: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು