News Kannada
Saturday, May 14 2022
ಕ್ರೀಡೆ

ಐಪಿಎಲ್​​ಗೆ ನಿವೃತ್ತಿ ಘೋಷಣೆ ಮಾಡಿದ ಬೆನ್ನಲ್ಲೇ ಮನಸ್ಸು ಬದಲಾಯಿಸಿದ ಬ್ಯಾಟ್ಸಮನ್!

ಐಪಿಎಲ್ : ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ಸಮನ್ ಅಂಬಾಟಿ ರಾಯುಡು ದಿಢೀರ್​ ಆಗಿ ಐಪಿಎಲ್​​ಗೆ ನಿವೃತ್ತಿ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ತಾವು ಮಾಡಿರುವ ಟ್ವೀಟ್ ಡಿಲೀಟ್​ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಐಪಿಎಲ್ ನಲ್ಲಿ ಒಟ್ಟು 187 ಪಂದ್ಯಗಳನ್ನಾಡಿದ್ದು, 4,187ರನ್​​​​ಗಳಿಕೆ ಮಾಡಿದ್ದಾರೆ. ಇದರಲ್ಲಿ 1 ಶತಕ ಹಾಗೂ 22 ಅರ್ಧಶತಕಗಳಿವೆ. ಪ್ರಸಕ್ತ ಸಾಲಿನ ಐಪಿಎಲ್​​​ನಲ್ಲಿ 12 ಪಂದ್ಯಗಳಿಂದ ರಾಯುಡು ಕೇವಲ 271 ರನ್​​ಗಳಿಕೆ ಮಾಡಿದ್ದು, ಹೇಳಿಕೊಳ್ಳುವಂತಹ ಪ್ರದರ್ಶನವನ್ನೇನೂ ನೀಡಿಲ್ಲ.

ರಾಯುಡು ಟ್ವೀಟ್
ಇದು ನನ್ನ ಕೊನೆಯ ಐಪಿಎಲ್​​ ಎಂದು ಘೋಷಣೆ ಮಾಡಲು ಸಂತೋಷವಾಗುತ್ತದೆ. ಕಳೆದ 13 ವರ್ಷಗಳಿಂದ ಎರಡು ಉತ್ತಮ ತಂಡಗಳಲ್ಲಿ ಅದ್ಭುತ ಸಮಯ ಕಳೆದಿದ್ದೇನೆ. ಈ ಪಯಣಕ್ಕೆ ಅವಕಾಶ ಕಲ್ಪಿಸಿಕೊಟ್ಟ ಮುಂಬೈ ಇಂಡಿಯನ್ಸ್​ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಧನ್ಯವಾದ ಹೇಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ರಾಯುಡು ಟ್ವೀಟ್ ಮಾಡುತ್ತಿದ್ದಂತೆ ಅನೇಕರು ಅವರಿಗೆ ವಿಶ್​ ಸಹ ಮಾಡಿದ್ದಾರೆ. ಆದರೆ, ಸಿಎಸ್​​ಕೆ ತಂಡದ ಸಿಇಒ ಕಾಶಿ ವಿಶ್ವನಾಥ್​​, ರಾಯುಡು ಐಪಿಎಲ್​​​ನಿಂದ ನಿವೃತ್ತಿ ಪಡೆದುಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. ಆದರೆ, ಇದಕ್ಕೆ ಸಂಬಂಧಿಸಿದಂತೆ ರಾಯುಡು ಯಾವುದೇ ರೀತಿಯ ಸ್ಪಷ್ಟನೆ ನೀಡಿಲ್ಲ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.