News Kannada
Tuesday, July 05 2022

ಕ್ರೀಡೆ

ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್! - 1 min read

Photo Credit : Twitter

 ದೆಹಲಿ: ಟೀಮ್‌ ಇಂಡಿಯಾ ಮಹಿಳಾ ಏಕದಿನ ಮತ್ತು ಟೆಸ್ಟ್ ತಂಡದ ನಾಯಕಿ ಮಿಥಾಲಿ ರಾಜ್ ಬುಧವಾರ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ್ದಾರೆ.

ಟೀಮ್‌ ಇಂಡಿಯಾವನ್ನು ಸುಮಾರು 23 ವರ್ಷಗಳ ಕಾಲ ಪ್ರತಿನಿಧಿಸಿದ್ದ ಮಿಥಾಲಿ ರಾಜ್ ಹಲವಾರು ವಿಶ್ವದಾಖಲೆಗಳನ್ನು ಬರೆದಿದ್ದಾರೆ. ವನಿತೆಯರ ಏಕದಿನ ಮಾದರಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯಾಗಿ ಮಿಥಾಲಿ ನಿವೃತ್ತಿಯಾಗುತ್ತಿದ್ದಾರೆ.

ಜೂನ್ 26, 1999 ರಂದು ಮಿಲ್ಟನ್ ಕೇನ್ಸ್‌ನಲ್ಲಿ ಐರ್ಲೆಂಡ್ ವಿರುದ್ಧ ಪಾದಾರ್ಪಣೆ ಮಾಡಿದ ಬಳಿಕ ಅವರು 232 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. 50.68 ರ ಸರಾಸರಿಯಲ್ಲಿ 7805 ರನ್ ಕಲೆಹಾಕಿದ್ದಾರೆ. ದೇಶಕ್ಕಾಗಿ 12 ಟೆಸ್ಟ್ ಮತ್ತು 89 T20 ಗಳನ್ನು ಆಡಿದ್ದು, ಕ್ರಮವಾಗಿ 699 ಮತ್ತು 2364 ರನ್ ಗಳಿಸಿದ್ದಾರೆ.

“ಇಷ್ಟು ವರ್ಷಗಳಿಂದ ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು. ನಿಮ್ಮ ಆಶೀರ್ವಾದ ಮತ್ತು ಬೆಂಬಲದೊಂದಿಗೆ ನನ್ನ 2ನೇ ಇನ್ನಿಂಗ್ಸ್‌ಗಾಗಿ ಎದುರು ನೋಡುತ್ತಿದ್ದೇನೆ ಎಂದು ಮಿಥಾಲಿ ಟ್ವಿಟ್‌ ಮಾಡಿದ್ದಾರೆ. ಸಾರ್ವಕಾಲಿಕ ಶ್ರೇಷ್ಠ ಮಹಿಳಾ ಆಟಗಾರ್ತಿಯರಲ್ಲಿ ಒಬ್ಬರೆಂದು ಗುರುತಿಸಿಕೊಂಡಿರುವ 39ರ ಹರೆಯದ ಮಿಥಾಲಿ, ಭಾರತ ತಂಡದ ನಾಯಕಿಯಾಗಿ ತನಗೆ ನೀಡಿದ ಬೆಂಬಲಕ್ಕಾಗಿ ಬಿಸಿಸಿಐಗೆ  ಹೃತ್ಪೂರ್ವಕ ಧನ್ಯವಾದ ಅರ್ಪಿಸಿದ್ದಾರೆ.

See also  ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್: ಭಾರತಕ್ಕೆ ಆರಂಭಿಕ ಮುನ್ನಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು