ವೆಸ್ಟ್ ಇಂಡೀಸ್ ವಿರುದ್ಧದ ಮೂರು ಏಕದಿನ ಪಂದ್ಯಗಳಿಗೋಸ್ಕರ ಭಾರತ ತಂಡ ಪ್ರಕಟಗೊಂಡಿದ್ದು, ಆರಂಭಿಕ ಆಟಗಾರ ಶಿಖರ್ ಧವನ್ ಕ್ಯಾಪ್ಟನ್ ಆಗಿ ಆಯ್ಕೆಯಾಗಿದ್ದಾರೆ.
16 ಸದಸ್ಯರ ತಂಡ ಪ್ರಕಟಗೊಳಿಸಲಾಗಿದ್ದು, ಉಪನಾಯಕನಾಗಿ ಆಲ್ರೌಂಡರ್ ರವೀಂದ್ರ ಜಡೇಜಾ ಆಯ್ಕೆಯಾಗಿದ್ದಾರೆ.
ತಂಡದಲ್ಲಿ ಕೆಲವೊಂದು ಹೊಸ ಪ್ರತಿಭೆಗಳಿಗೆ ಸ್ಥಾನ ನೀಡಲಾಗಿದೆ. ಮುಖ್ಯವಾಗಿ ದೀಪಕ್ ಹೂಡಾ, ಅರ್ಷದೀಪ್ ಸಿಂಗ್, ಆವೇಶ್ ಖಾನ್ ಹಾಗೂ ಪ್ರಸಿದ್ಧ್ ಕೃಷ್ಣ ಚಾನ್ಸ್ ಪಡೆದುಕೊಂಡಿದ್ದಾರೆ.
ರಿಷಭ್ ಪಂತ್ಗೆ ವಿಶ್ರಾಂತಿ ನೀಡಿರುವ ಕಾರಣ ಇಬ್ಬರು ವಿಕೆಟ್ ಕೀಪರ್ಗಳಾದ ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ಗೆ ಅವಕಾಶ ನೀಡಲಾಗಿದೆ. ಜುಲೈ 22ರಿಂದ ಏಕದಿನ ಸರಣಿ ಆರಂಭಗೊಳ್ಳಲಿದೆ.
ಏಕದಿನ ತಂಡ
ಶಿಖರ್ ಧವನ್(ಕ್ಯಾಪ್ಟನ್), ಋತುರಾಜ್ ಗಾಯಕ್ವಾಡ್, ಶುಬ್ಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್(ವಿ.ಕೀ), ಸಂಜು ಸ್ಯಾಮ್ಸನ್(ವಿ.ಕೀ), ರವೀಂದ್ರ ಜಡೇಜಾ(ಉಪನಾಯಕ), ಶಾರ್ದೂಲ್ ಠಾಕೂರ್. ಯಜುವೇಂದ್ರ ಚಹಲ್, ಅಕ್ಸರ್ ಪಟೇಲ್, ಆವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್
ಹಿರಿಯ ಪ್ಲೇಯರ್ಸ್ಗೆ ವಿಶ್ರಾಂತಿ:
ಟೀಂ ಇಂಡಿಯಾ ಸಿಮೀತ ಓವರ್ಗಳ ನಾಯಕನಾಗಿರುವ ರೋಹಿತ್ ಶರ್ಮಾ, ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ, ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಹಾಗೂ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ.