News Kannada
Thursday, August 11 2022

ಕ್ರೀಡೆ

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ರಾಷ್ಟ್ರ ಧ್ವಜ ಹಿಡಿದು ತಂಡ ಮುನ್ನಡೆಸಲಿದ್ದಾರೆ ಸಿಂಧು - 1 min read

Sindhu to lead team holding national flag at Commonwealth Games opening ceremony

ಬರ್ಮಿಂಗ್‌ಹ್ಯಾಂ: ಗುರುವಾರ ಆರಂಭವಾಗಲಿರುವ ಕಾಮನ್‌ವೆಲ್ತ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ತ್ರಿವರ್ಣ ಧ್ವಜ ಹಿಡಿದು ಭಾರತ ತಂಡವನ್ನು ಒಲಿಂಪಿಕ್ ಪದಕ ವಿಜೇತೆ ಪಿ.ವಿ. ಸಿಂಧು ಅವರು ಮುನ್ನಡೆಸಲಿದ್ದಾರೆ.

‘ಸಿಂಧು ಅವರು ರಾಷ್ಟ್ರಧ್ವಜ ಹಿಡಿದುಕೊಂಡು ಉದ್ಘಾಟನಾ ಸಮಾರಂಭದಲ್ಲಿ ಭಾರತದ ಕ್ರೀಡಾಪಟುಗಳ ತಂಡವನ್ನು ಮುನ್ನಡೆಸಲಿದ್ದಾರೆ’ ಎಂದು ಭಾರತೀಯ ಒಲಿಂಪಿಕ್ ಸಂಸ್ಥೆಯ (ಐಒಎ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉದ್ಘಾಟನಾ ಸಮಾರಂಭದಲ್ಲಿ 164 ಅಥ್ಲೀಟ್‌ಗಳು ಭಾಗವಹಿಸಲಿದ್ದಾರೆ. ಒಟ್ಟು 215 ಕ್ರೀಡಾಪಟುಗಳು ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ನಮ್ಮ ದೇಶವನ್ನು ಪ್ರತಿನಿಧಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಿಂಧು ಅವರು ಭಾರತದ ಪರ ಚಿನ್ನದ ಪದಕ ಗೆಲ್ಲುವ ನೆಚ್ಚಿನ ಕ್ರೀಡಾಪಟುವಾಗಿದ್ದಾರೆ. ಕಳೆದ ಎರಡು ಆವೃತ್ತಿಯಲ್ಲಿ ಬೆಳ್ಳಿ (ಗೋಲ್ಡ್‌ ಕೋಸ್ಟ್‌ನಲ್ಲಿ) ಹಾಗೂ ಕಂಚಿನ ಪದಕ (ಗ್ಲಾಸ್ಗೊ) ಜಯಿಸಿದ್ದಾರೆ.

 

See also  ಕಾರು ಅಪಘಾತದಲ್ಲಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರದ ಕ್ರಿಕೆಟಿಗ ಮೊಹಮ್ಮದ್ ಶಮಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು