News Kannada
Wednesday, August 10 2022

ಕ್ರೀಡೆ

ವೆಸ್ಟ್‌ ಇಂಡೀಸ್‌ ವಿರುದ್ಧ ಮೊದಲ ಟಿ.20 ಪಂದ್ಯದಲ್ಲಿ 68 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದ ಭಾರತ - 1 min read

India beat West Indies by 68 runs in 1st T20I

ಟಿ.20 : ನಾಯಕ ರೋಹಿತ್‌ ಶರ್ಮಾ ಹಾಗೂ ದಿನೇಶ್ ಕಾರ್ತಿಕ್ ಅಬ್ಬರದ ಬ್ಯಾಟಿಂಗ್‌ ಬಲದಿಂದ ಭಾರತ ತಂಡವು ವೆಸ್ಟ್‌ ಇಂಡೀಸ್‌ ವಿರುದ್ಧ ಮೊದಲ ಟಿ.20 ಪಂದ್ಯದಲ್ಲಿ 68 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ.

ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಐದು ಪಂದ್ಯಗಳ ಟಿ20 ಅಂತರಾಷ್ಟ್ರೀಯ ಸರಣಿಯ ಮೊದಲ  ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಗೆ ಇಳಿದ ಭಾರತ  ತಂಡ ನಿಗದಿತ 20 ಓವರ್‌ಗಳಲ್ಲಿ 190 ರನ್‌ಗಳ ಬೃಹತ್‌ ಮೊತ್ತ ಕಲೆಹಾಕಿತು.

ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್‌ ಆರಂಭದಿಂದಲೇ ಅಬ್ಬರಿಸಿದರು. ಇವರಿಬ್ಬರ ಪಾಲುದಾರಿಕೆಯಲ್ಲಿ ಮೊದಲ ವಿಕೆಟ್‌ಗೆ ಕೇವಲ 4.4 ಓವರ್‌ಗಳಲ್ಲೇ 44 ರನ್‌ ಹರಿದುಬಂತು. ಕೇವಲ 44 ಎಸೆತಗಳಲ್ಲಿ 7 ಬೌಂಡರಿ, ಎರಡು ಭರ್ಜರಿ ಸಿಕ್ಸರ್‌ಗಳೊಂದಿಗೆ 64 ರನ್ ಕಲೆಹಾಕಿದ ರೋಹಿತ್‌ ತಂಡಕ್ಕೆ ಉತ್ತಮ ಅಡಿಪಾಯ ಹಾಕಿದರು.

ಆ ಬಳಿಕ ಹಟಾತ್‌ ಕುಸಿದ ತಂಡಕ್ಕೆ ದಿನೇಶ್ ಕಾರ್ತಿಕ್ ಆಧಾರವಾದರು. ಕೇವಲ 19 ಎಸೆತಗಳಲ್ಲಿ ಅಜೇಯ 41 ರನ್ (4 ಬೌಂಡರಿ, 2 ಸಿಕ್ಸರ್) ಸಿಡಿಸಿದ ಡಿಕೆ ಭಾರತವನ್ನು ಬೃಹತ್‌ ಮತ್ತದತ್ತ ಕೊಂಡೊಯ್ದರು. ಕೊನೆಯ ನಾಲ್ಕು ಓವರ್‌ಗಳಲ್ಲಿ ರವಿ ಅಶ್ವಿನ್‌ರೊಂದಿಗೆ ಅವರ ಮುರಿಯದ ಏಳನೇ ವಿಕೆಟ್ ಜೊತೆಯ 52 ರ ಕಲೆಹಾಕಿ ವೆಸ್ಟ್‌ ಇಂಡೀಸ್‌ ಬೌಲರ್‌ ಗಳ ಬೆವರಿಳಿಸಿದರು.

191 ರನ್‌ಗಳ ಬೃಹತ್‌ ಗುರಿ ಬೆನ್ನತ್ತಿದ ವೆಸ್ಟ್‌ ಇಂಡೀಸ್‌ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ  122 ರನ್‌ಗಳನ್ನಷ್ಟೇ ಗಳಿಸಲು ಶಕ್ತವಾಗಿ ಸೋಲೊಪ್ಪಿಕೊಂಡಿತು. ಭಾರತದ ಪರ ರವಿ ಬಿಷ್ನೋಯ್‌, ಅಶ್ವಿನ್‌, ಅರ್ಶ್‌ದೀಪ್‌ ಸಿಂಗ್‌ ತಲಾ 2 ವಿಕೆಟ್‌ ಪಡೆದರು. ಭುವನೇಶ್ವರ್‌ ಕುಮಾರ್‌, ರವಿಂದ್ರ ಜಡೇಜಾ, ಹಾರ್ದಿಕ್‌ ಪಾಂಡ್ಯ  ಒಂದು ವಿಕೆಟ್‌ ಗಳಿಸಿ ವಿಂಡೀಸ್‌ ಕುಸಿತಕ್ಕೆ ಕಾರಣರಾದರು.

See also  ಇನ್ನು ಚೆನ್ನೈಯಲ್ಲಿ ಐಪಿಎಲ್ ಪಂದ್ಯಗಳು ನಡೆಯಲ್ಲ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು