ಪರ್ತ್: ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ತೀವ್ರ ಅಸ್ವಸ್ಥಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಿಕಿ ಪಾಂಟಿಂಗ್ ಇಂದು ಪರ್ತ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದಂತ ವೆಸ್ಟ್ ಇಂಡೀಸ್ ವಿರುದ್ಧದ ಆಸ್ಟ್ರೇಲಿಯಾದ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ಸಮಯದಲ್ಲಿ ಎದೆ ನೋವು ಕಾಣಿಸಿಕೊಂಡಿತು.
ಫಾಕ್ಸ್ ಸ್ಪೋರ್ಟ್ಸ್ನ ವರದಿಯ ಪ್ರಕಾರ, ಚಾನೆಲ್ 7 ರಲ್ಲಿ ವೀಕ್ಷಕ ವಿವರಣೆಗಾರರಾಗಿ ಗುತ್ತಿಗೆ ಪಡೆದಿರುವ ಪಾಂಟಿಂಗ್ ಅವರನ್ನು ಮೂರನೇ ದಿನದ ಊಟದ ಸಮಯದಲ್ಲಿ ರಾಯಲ್ ಪರ್ತ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸದ್ಯಕ್ಕೆ ಬಂದಿರುವ ಮಾಹಿತಿ ಪ್ರಕಾರ ಪಾಂಟಿಂಗ್ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ತಿಳಿದುಬಂದಿದೆ.